ಮತ್ಸೃ ಸಂಸ್ಕರಣಾ ಕಂಪನಿಗೆ ಬೆಂಕಿ

mng--14 july sez Fire
Published on


ಮಂಗಳೂರು: ಇಲ್ಲಿನ ಎಂಎಸ್‌ಇಝೆಡ್ ಕೈಗಾರಿಕಾ ವಲಯದಲ್ಲಿ ಕಾರ್ಯಾಚರಿಸುತ್ತಿರುವ ಮತ್ಸೃ ಸಂಸ್ಕರಣಾ ಕಂಪನಿ ಅಥೆಂಟಿಕ್ ಓಷನ್ ಟ್ರೆಷರ್‌ನಲ್ಲಿ ಭಾನುವಾರ ಆಕಸ್ಮಿಕ ಬೆಂಕಿ ಸಂಭವಿಸಿ ಅಪಾರ ಮೌಲ್ಯದ ಸೊತ್ತುಗಳು ಸುಟ್ಟು ಕರಕಲಾಗಿವೆ.


ಕಂಪನಿಯಲ್ಲಿ ದುರಸ್ಥಿ ಕಾರ್ಯ ನಡೆಯುತ್ತಿದ್ದರಿಂದ ಕಾರ್ಮಿಕರು ಇರಲಿಲ್ಲ. ಹಾಗಾಗಿ ಪ್ರಾಣ ಹಾನಿ ಸಂಭವಿಸಿಲ್ಲ. ಕಂಪೆನಿಯ ಕೋಲ್ಡ್ ಸ್ಟೋರೆಜ್ ಸೆಕ್ಷನ್ ಮತ್ತು ಕಟ್ಟಿಂಗ್ ಸೆಕ್ಷನ್‌ನಲ್ಲಿ ದುರಸ್ಥಿ ಕಾರ್ಯ ನಡೆಯುತ್ತಿದ್ದು, ಈ ವೇಳೆ ಕೋಲ್ಡ್ ಸ್ಟೋರೆಜ್ ಸೆಕ್ಷನ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಅವಘಡ ಸಂಭವಿಸಿದೆ.


ಕಟ್ಟಡದೊಳಗಿದ್ದ ಅಪಾರ ಮೌಲ್ಯದ ಮತ್ಸೃ ಉತ್ಪನ್ನಗಳು ಬೆಂಕಿಗಾಹುತಿಯಾಗಿವೆ. ಎಂಆರ್‌ಪಿಎಲ್, ಗೇಲ್ ಇಂಡಿಯಾ ಕಂಪೆನಿಗಳ ಅಗ್ನಿಶಾಮಕದಳಗಳು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಭಾಗಿಯಾದವು.


ಅಥ್ಲೆಂಟಿಕ್ ಓಷನ್ ಟ್ರೆಷರ್ ಕಂಪನಿಯು ಮೀನುಗಳನ್ನು ಸ್ವಚ್ಛಗೊಳಿಸಿ ಮಾಂಸ ರೂಪಕ್ಕೆ ತಂದು ಅದನ್ನು 10 ಕೆ.ಜಿ.ಯ ಪ್ಯಾಕೆಟ್‌ಗಳನ್ನಾಗಿ ವಿದೇಶಗಳಿಗೆ ರಫ್ತು ಮಾಡುವ ಕಂಪನಿಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net