

ಮಂಗಳೂರು: ನಗರದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ಪ್ರಕರಣವಿದ್ದು, ಬಳಿಕ ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡ ಆರೋಪಿಯನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಂಜನಾಡಿ ಕಲ್ಕಟ್ಟ ನಿವಾಸಿ ಮಹಮ್ಮದ್ ಸಾದಿಕ್ (35) ಬಂಧಿತ ಆರೋಪಿ.
ಆರೋಪಿಯ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ 3 ವಾರಂಟ್, ಉಳ್ಳಾಲದಲ್ಲಿ 1ವಾರಂಟ್ ಇದೆ. ಈತ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಹಲವು ವರ್ಷದಿಂದ ತಲೆಮರೆಸಿಕೊಂಡಿದ್ದು, ಕೋರ್ಟ್ ವಾರಂಟ್ ಹೊರಡಿಸಿತ್ತು. ಈತನಿಗೆ ಕಂಕನಾಡಿ ನಗರ ಠಾಣಾ ಪೊಲೀಸರು ಶೋಧ ನಡೆಸುತ್ತಿದ್ದು, ಖಚಿತ ಮಾಹಿತಿ ಹಿನ್ನಲೆಯಲ್ಲಿ ಈತನನ್ನು ಕಾಸರಗೋಡಿನಲ್ಲಿ ಬಂಧಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಕಂಕನಾಡಿ ನಗರ ಠಾಣಾ ಇನ್‌ಸ್ಪೆಕ್ಟರ್ ಟಿ.ಡಿ. ನಾಗರಾಜ್, ಎಎಸ್‌ಐ ವೆಂಕಟೇಶ್ ಮತ್ತು ಸಿಬ್ಬಂದಿ ಗಂಗಾಧರ್, ಶಿವಾನಂದ್ ಭಾಗವಹಿಸಿದ್ದರು.