2024ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಪ್ರಕಟ

konkani
Published on

ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2024ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಪ್ರಕಟಗೊಂಡಿದೆ.

ಕೊಂಕಣಿ ಸಾಹಿತ್ಯ ಕ್ಷೇತ್ರದಲ್ಲಿ ಎಂ.ಪ್ಯಾಟ್ರಿಕ್ ಮೊರಾಸ್ ಮಂಗಳೂರು, ಕೊಂಕಣಿ ಕಲೆ ಜೊಯಲ್ ಪಿರೇರಾ ಮಂಗಳೂರು, ಕೊಂಕಣಿ ಜಾನಪದ ಸೊಬೀನಾ ಮೊತೇಶ್ ಕಾಂಬ್ರೆಕರ್ ಹಳಿಯಾಳ. 2024ನೇ ಸಾಲಿನ ಪುಸ್ತಕ ಪುರಸ್ಕಾರಕ್ಕೆ ಕೊಂಕಣಿ ಕವನ ಪುಸ್ತಕ ‘ಪಾಲ್ವಾ ಪೊಂತ್’ ಫೆಲ್ಸಿ ಲೋಬೊ ದೇರೆಬೈಲ್, ಕೊಂಕಣಿ ಲೇಖನ ಪುಸ್ತಕ ‘ಶೆತಾಂ ಭಾಟಾಂ ತೊಟಾಂನಿ’ ವಲೇರಿಯನ್ ಸಿಕ್ವೇರಾ ಕಾರ್ಕಳ ಆಯ್ಕೆಯಾಗಿದ್ದಾರೆ ಎಂದು ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟಾೃನಿ ಅಲ್ವಾರಿಸ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಗೌರವ ಪ್ರಶಸ್ತಿಯು 50,000 ರೂ., ಪುಸ್ತಕ ಪುರಸ್ಕಾರವು 25,000 ರೂ. ಹಾಗೂ ಪ್ರಮಾಣ,ಪತ್ರ, ಶಾಲು, ಹಾರ, ಪೇಟ, ಸ್ಮರಣಿಕೆ, ಫಲಪುಷ್ಪಗಳನ್ನು ಒಳಗೊಂಡಿದೆ.

* 23ರಂದು ಪ್ರದಾನ: ಕರ್ನಾಟಕ ಕೊಂಕಣಿ ಸಾಹಿತ್ಯ ಕೊಂಕಣಿ ಕ್ರಿಶ್ಚಿಯನ್ ಅಸೋಸಿಯೇಶನ್ ಮೈಸೂರು ಸಹಯೋಗದೊಂದಿಗೆ ಮಾ. 23ರಂದು ಸಂಜೆ 5 ಗಂಟೆಗೆ ಮೈಸೂರಿನ ವಿಜಯನಗರದ ಕೊಂಕಣ್ ಭವನದಲ್ಲಿ ಪ್ರಶಸ್ತಿ ಪ್ರದಾನ ಜರುಗಲಿರುವುದು. ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಹರೀಶ್ ಗೌಡ ಕಾರ್ಯಕ್ರಮ ಉದ್ಘಾಟಿಸುವರು. ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ, ಡಾ. ಡಿ. ತಿಮ್ಮಯ್ಯ,ವಲೇರಿಯನ್ ಡಿಸೋಜ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರು ವಿಭಾಗದ ಜಂಟಿ ನಿರ್ದೇಶಕ ವಿ. ಎನ್. ಮಲ್ಲಿಕಾರ್ಜುನ ಸ್ವಾಮಿ ಮೊದಲಾದವರು ಭಾಗವಹಿಸುವರು.

ನಂತರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಿದ್ದಿ ಸಮುದಾಯದ ಸಾಂಸ್ಕೃತಿಕ ನೃತ್ಯ, ಬ್ರಾಸ್ ಬ್ಯಾಂಡ್, ಕೊಂಕಣಿ ಸಂಗೀತ ರಸಮಂಜರಿ ಕಾರ್ಯಕ್ರಮವು ನಡೆಯಲಿರುವುದು.

ಕೊಂಕಣಿ ಜಿ.ಎಸ್.ಬಿ. ಸಭಾ, ಮೈಸೂರು ಮತ್ತು ಮುರುಡೇಶ್ವರ ನವಾಯತ್ ಅಸೋಸಿಯೇಶನ್ ಮೈಸೂರು ಇವರು ಈ ಕಾರ್ಯಕ್ರಮಕ್ಕೆ ಸಹಕಾರ ನೀಡಲಿದ್ದಾರೆ ಎಂದವರು ಹೇಳಿದರು.

ಸದಸ್ಯರಾದ ನವೀನ್ ಕೆನ್ಯುಟ್ ಲೋಬೊ, ರೊನಾಲ್ಡ್ ಕ್ರಾಸ್ತಾ, ಫೋರ್‌ವಿಂಡ್ಸ್ ಸಂಸ್ಥೆಯ ಎಲಿಯಾಸ್ ಫರ್ನಾಂಡಿಸ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net