ಠಾಗೋರ್ ಪಾರ್ಕ್‌ನಲ್ಲಿ ಜಿಲ್ಲೆಯ ಅತಿ ಎತ್ತರದ ಧ್ವಜಸ್ತಂಭ ನಿರ್ಮಾಣಕ್ಕೆ ಶಿಲಾನ್ಯಾಸ

mng--15 sep Tagore park
Published on

ಮಂಗಳೂರು: ಸ್ಮಾರ್ಟ್‌ಸಿಟಿ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಅತಿ ಎತ್ತರ ಧ್ವಜಸ್ತಂಭ ನಿರ್ಮಾಣಕ್ಕೆ ಭಾನುವಾರ ಬಾವುಟಗುಡ್ಡೆಯ ಡಾಗೋರ್ ಪಾರ್ಕ್‌ನಲ್ಲಿ ಶಿಲಾನ್ಯಾಸ ನೆರವೇರಿಸಲಾಯಿತು.


1837ರಲ್ಲಿ ಮಂಗಳೂರನ್ನು ಕೇಂದ್ರ ಸ್ಥಾನವನ್ನಾಗಿ ಮಾಡಿ ಆಡಳಿತ ನಡೆಸುತ್ತಿದ್ದ ಬ್ರಿಟೀಷರನ್ನು ಕೆದಂಬಾಡಿ ರಾಮಯ್ಯ ಗೌಡರು ರೈತವೀರರನ್ನು ಸಂಘಟಿಸಿ ಹೋರಾಟ ಮಾಡಿ ಬಾವುಟಗುಡ್ಡೆಯಲ್ಲಿ ಬ್ರಿಟೀಷ್ ಧ್ವಜವನ್ನು ಇಳಿಸಿ ನಮ್ಮ ದೇಶವನ್ನು ಸ್ವಾತಂತ್ರ್ಯವೆಂದು ಘೋಷಿಸಿ ಸುಮಾರು 13 ದಿವಸಗಳವರೆಗೆ ನಮ್ಮ ನೆಲದ ಕ್ರಾಂತಿಕಾರಿ ಬಾವುಟವನ್ನು ಕೆದಂಬಾಡಿ ರಾಮಯ್ಯ ಗೌಡರು ಏರಿಸಿದ್ದರು.


ಬಾವುಟಗುಡ್ಡೆಯ ಇತಿಹಾಸವನ್ನು ಶಾಶ್ವತಗೊಳಿಸುವ ಸಲುವಾಗಿ ಧ್ವಜಸ್ತಂಭವನ್ನು ನಿರ್ಮಿಸಲು ಸ್ವಾತ್ರಂತ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿಯ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು ಅವರು ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ ಅವರಿಗೆ ಮನವಿ ಸಲ್ಲಿಸಿದ್ದರು. ಅದರಂತೆ ಮಂಜುನಾಥ ಭಂಡಾರಿ ಅವರು ರಾಜ್ಯ ಸರ್ಕಾರದೊಂದಿಗೆ ಮಾತನಾಡಿ ಸ್ಮಾರ್ಟ್‌ಸಿಟಿ ವತಿಯಿಂದ ಜಿಲ್ಲೆಯಲ್ಲಿಯೇ ಅತಿ ಎತ್ತರವಾದ ಧ್ವಜ ಸ್ತಂಭವನ್ನು ನಿರ್ಮಿಸುವಂತೆ ಮನವಿ ಮಾಡಿದ್ದಾರೆ.


ಡಾ.ಮಂಜುನಾಥ ಭಂಡಾರಿ, ಶಾಸಕ ವೇದವಾಸ್ ಕಾಮತ್,ಮೇಯರ್ ಸುಧೀರ್ ಶೆಟ್ಟಿ , ಮನಪಾ ವಿರೋಧ ಪಕ್ಷದ ನಾಯಕ ಪ್ರವೀಣ್ ಚಂದ್ರ ಆಳ್ವ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್ ಹಾಗೂ ಪಾಲಿಕೆಯ ಸದಸ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net