

ಮಂಗಳೂರು: ಮೇರಿಹಿಲ್ ಮೌಂಟ್ ಕಾರ್ಮೆಲ್ ಸೆಂಟ್ರಲ್ ಸ್ಕೂಲ್ ಸಭಾಂಗಣದಲ್ಲಿ ಶುಕ್ರವಾರ ಅಂತರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.
ಆವಿಷ್ಕಾರ ಯೋಗ ಚಿಕಿತ್ಸಿಕ ಕುಶಾಲಪ್ಪ ಗೌಡ ಮುಖ್ಯ ಅತಿಥಿಯಾಗಿದ್ದರು. ವಿದ್ಯಾರ್ಥಿಗಳು ಪ್ರತಿ ನಿತ್ಯ ಯೋಗಾಭ್ಯಾಸ ಮಾಡುವುದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢಗೊಳ್ಳಲು ಸಾಧ್ಯ. ಇದರಿಂದ ಕಲಿಕೆಗೂ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ಕಿರಿಯರ ವಿಭಾಗದ ಕಾರ್ಯಕ್ರಮದಲ್ಲಿ ದೇಲಂಪಾಡಿ ಯೋಗ ಪ್ರತಿಷ್ಠಾನದ ಯೋಗಶಿಕ್ಷಕಿ ಸುಶೀಲಾ ಕುಮಾರಿ ಅತಿಥಿಯಾಗಿದ್ದರು. ವಿದ್ಯಾರ್ಥಿಗಳು ಯೋಗಾಸನ ಮಾಡುವ ಜತೆಗೆ ಅದರ ಮಹತ್ವವನ್ನು ಅರಿತುಕೊಳ್ಳಬೇಕು ಎಂದರು.
ಶಾಲಾ ಪ್ರಾಂಶುಪಾಲೆ ಭಗಿನಿ ಮೆಲಿಸ್ಸಾ, ಆಡಳಿತಾಧಿಕಾರಿ ಭಗಿನಿ ಕರಿಸ್ಸಿಮ, ಶಿಕ್ಷಕ ವ್ರಂದ ಮತ್ತು ಮಕ್ಕಳ ಪೋಷಕರು ಉಪಸ್ಥಿತರಿದ್ದರು.