More

    ಮಾಡೆಲಿಂಗ್​ ಕನಸಿನೊಂದಿಗೆ ಬೆಂಗಳೂರಿಗೆ ಹೊರಟಿದ್ದ ಯುವತಿ ನೇಣಿಗೆ ಶರಣು! ಸಾವಿನ ಹಿಂದೆ ಗಾಂಜಾ ಮಾಫಿಯಾದ ಕೈ?

    ಮಂಗಳೂರು: ಮಾಡೆಲಿಂಗ್​ ಕ್ಷೇತ್ರದಲ್ಲಿ ಸಾಧನೆ ಮಾಡಬೇಕೆಂದು ಕನಸು ಕಂಡಿದ್ದ ಯುವತಿಯೊಬ್ಬಳು ನೇಣಿಗೆ ಕೊರಳೊಡ್ಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಪ್ರಕರಣದ ಹಿಂದೆ ಗಾಂಜಾ ಮಾಫಿಯಾದ ಕೈವಾಡವಿದೆಯೇ ಎನ್ನುವ ಅನುಮಾನಗಳು ವ್ಯಕ್ತವಾಗಿದೆ.

    ಮಂಗಳೂರು ಹೊರವಲಯದ ಕುಂಪಲ ಆಶ್ರಯ ಕಾಲನಿಯಲ್ಲಿ ಇಂತದ್ದೊಂದು ಘಟನೆ ನಡೆದಿದೆ. ಚಿತ್ತಪ್ರಸಾದ್ ಎಂಬವರ ಪುತ್ರಿ ಪ್ರೇಕ್ಷಾ (20) ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ತಾಯಿ ಅಂಗನವಾಡಿಯಲ್ಲಿ ಕೆಲಸ ಮಾಡುತ್ತಿದ್ದಳು. ಬುಧವಾರದಂದು ಕಾಲೇಜಿಗೆ ತೆರಳದ ಪ್ರೇಕ್ಷಾ, ತಾಯಿ ಕೆಲಸಕ್ಕೆ ಹೋದ ಸಮಯದಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ಪ್ರೇಕ್ಷಾಳ ಸಾವಿಗೂ ಮೊದಲು ಆಕೆಯ ಮನೆ ಬಳಿ ಮೂವರು ಯುವಕರು ಬಂದಿದ್ದರು ಎನ್ನಲಾಗಿದೆ. ಅದರಲ್ಲಿ ಒಬ್ಬಾತ ಗಾಂಜಾ ವ್ಯಸನಿ ಎನ್ನುವ ಮಾಹಿತಿಯಿದೆ. ಮಾಡೆಲಿಂಗ್​ ಕೆಲಸವೊಂದಕ್ಕಾಗಿ ಆಕೆ ಇಂದು ಬೆಂಗಳೂರಿಗೆ ಹೊರಡಬೇಕಿತ್ತು. ಆದರೆ ಅಷ್ಟರಲ್ಲಾಗಲೇ ಪ್ರಾಣ ತೆಗದುಕೊಳ್ಳುವ ನಿರ್ಧಾರ ಮಾಡಿದ್ದಾಳೆ. ಆ ಮೂವರು ಯುವಕರು ಏನಕ್ಕಾಗಿ ಬಂದಿದ್ದರು, ಪ್ರೇಕ್ಷಾಳ ಸಾವಿಗೆ ಕಾರಣವೇನು ಎನ್ನುವುದು ಇನ್ನೂ ತಿಳಿದುಬಂದಿಲ್ಲ.

    ಘಟನಾ ಸ್ಥಳಕ್ಕೆ ಉಳ್ಳಾಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ, ಬೆರಳಚ್ಚು ತಂಡ, ವಿಧಿ ವಿಜ್ಞಾನ ತಂಡದವರಿಂದಲೂ ಪರಿಶೀಲನೆ ನಡೆಸಲಾಗಿದೆ.

    ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

    VIDEO| ಬೀದಿ ನಾಯಿಗೆ ಊಟ ಹಾಕಿದ್ದಕ್ಕೆ ಫೈಟ್​! ಟೆಕ್ಕಿ ಮಹಿಳೆಯ ಮೇಲೆ ಹಲ್ಲೆ ಮಾಡಿರುವ ವಿಡಿಯೋ ವೈರಲ್​

    ಈ ಫೋಟೋದಲ್ಲಿರುವವರು ರಾಜ್ಯವೊಂದರ ಮಾಜಿ ಮುಖ್ಯಮಂತ್ರಿ! ಯಾರೆಂದು ಗುರುತಿಸಿ ಹೇಳಿ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts