ಮುಡಾ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್

mng--24 july muda fire
Published on

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿಯಲ್ಲಿ ಬುಧವಾರ ವಿದ್ಯುತ್ ಮೀಟರ್ ಬೋರ್ಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ.


ಕಟ್ಟಡದ ಮೀಟರ್ ಬೋರ್ಡ್‌ನ ವಯರಿಂಗ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿದ್ದು, ಬೆಂಕಿ ಕಾಣಿಸಿಕೊಂಡಿದೆ. ಕಚೇರಿಯಲ್ಲಿ ಕಾರ್ಯನಿರತ ಅಧಿಕಾರಿ, ಸಿಬ್ಬಂದಿ, ಸಾರ್ವಜಜನಿಕರು ಗಾಬರಿಗೊಂಡು ತಕ್ಷಣ ಹೊರಗೆ ಓಡಿ ಬಂದಿದ್ದಾರೆ. ಕಟ್ಟಡದೊಳಗೆ ಸಂಪೂರ್ಣ ಹೊಗೆ ಆವರಿಸಿಕೊಂಡಿದೆ. ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net