

ಮಂಗಳೂರು: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಕಳೆದ ನಾಲ್ಕು ದಶಕಗಳಿಂದ ನಾದಸ್ವರವಾದಕರಾಗಿ ಸೇವೆ ಸಲ್ಲಿಸುತ್ತಾ, ಸಾಂಪ್ರದಾಯಿಕ ಶಾಸ್ತ್ರೀಯ ನಾದಸ್ವರ ಕ್ಷೇತ್ರದಲ್ಲಿ, ಆಕಾಶವಾಣಿ ಟಾಪ್ ಶ್ರೇಣಿ ಕಲಾವಿದರಾಗಿ ಅನನ್ಯ ಸಾಧನೆಗೈದು ರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಪಡೆದವರು ನಾಗೇಶ್ ಬಪ್ಪನಾಡು ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ ಶ್ಲಾಘಿಸಿದರು.
ಶಾರದಾ ವಿದ್ಯಾಲಯದಲ್ಲಿ ಕಲ್ಕೂರ ಪ್ರತಿಷ್ಠಾನದ ವತಿಯಿಂದ ಏರ್ಪಡಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ನಾಗೇಶ್ ಬಪ್ಪನಾಡು ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಪ್ರಸಿದ್ಧ ವೈದ್ಯ ಡಾ. ಶಾಂತಾರಾಮ ಶೆಟ್ಟಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಎ.ಸಿ. ಭಂಡಾರಿ, ಶಾಸಕ ಡಿ. ವೇದವ್ಯಾಸ ಕಾಮತ್, ಕಸಾಪ ಜಿಲ್ಲಾಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್, ಕರಾವಳಿ ಲೇಖಕಿ-ವಾಚಕಿಯರ ಸಂಘದ ಅಧ್ಯಕ್ಷೆ ಶಕುಂತಳಾ ಶೆಟ್ಟಿ ವಿ. ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಎಚ್.ವಿ., ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಪು , ಕಾಸರಗೋಡು ಕಾರ್ಯನಿರತ ಪತ್ರಕರ್ತರ ಸಂಘ ಎ.ಆರ್. ಸುಬ್ಬಯ್ಯಕಟ್ಟೆ ಮುಂತಾದವರು ಉಪಸ್ಥಿತರಿದ್ದರು.