ಅ.11ರಂದು ಕೇಂದ್ರ ಮೈದಾನದಲ್ಲಿ ಕುಡ್ಲದ ಪಿಲಿಪರ್ಬ-2024ರ ಚಪ್ಪರ ಮುಹೂರ್ತ

pili
Published on

ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ಶಾಸಕ ಡಿ.ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ನಡೆಯಲಿರುವ ತೃತೀಯ ವರ್ಷದ ಕುಡ್ಲದ ಪಿಲಿ ಪರ್ಬ-2024 ದ ಚಪ್ಪರ ಮುಹೂರ್ತ ಕಾರ್ಯಕ್ರಮವು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಗುರುವಾರ ಜರುಗಿತು.


ಈ ಸಂದರ್ಭದಲ್ಲಿ ಮಾತನಾಡಿದ ವೇದವ್ಯಾಸ್ ಕಾಮತ್, ಕರಾವಳಿ ಭಾಗದಲ್ಲಿ ದಸರಾ ಎಂದರೆ ಅಲ್ಲಿ ಹುಲಿವೇಷ ಇದ್ದೇ ಇರುತ್ತದೆ. ಈ ಕಲೆ ಕರಾವಳಿ ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ ಜನಪ್ರಿಯತೆ ಪಡೆದುಕೊಂಡಿರುವುದು ಹೆಮ್ಮೆಯ ಸಂಗತಿಯಾಗಿದೆ. ಈ ಜನಪ್ರಿಯತೆ ಜೊತೆಗೆ ಈ ಕಲೆಗೆ ಇನ್ನಷ್ಟು ಮೆರುಗು ನೀಡುವ ನಿಟ್ಟಿನಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಇದೇ ಅ. 11 ರಂದು ನಡೆಯಲಿರುವ ತೃತೀಯ ವರ್ಷದ ಪಿಲಿಪರ್ಬವು ತುಳುನಾಡಿನ ಗತವೈಭವದ ಘನಪರಂಪರೆಯನ್ನು ಮೆಲುಕು ಹಾಕುವ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನ ಪ್ರಯತ್ನವಾಗಿದೆ ಎಂದರು.


ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷ ಗಿರಿಧರ್ ಶೆಟ್ಟಿ, ಅಧ್ಯಕ್ಷ ದಿವಾಕರ್ ಪಾಂಡೇಶ್ವರ, ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪ್ರಮುಖರಾದ ನರೇಶ್ ಶೆಣೈ, ಮ.ನ.ಪಾ. ಸದಸ್ಯರಾದ ಮನೋಹರ್ ಕದ್ರಿ, ಶಕೀಲ ಕಾವ, ವೀಣಾ ಮಂಗಲ ಮೊದಲಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net