

ಮಂಗಳೂರು: ನಗರ ನೂತನ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಶುಕ್ರವಾರ ನಿರ್ಗಮಿತ ಆಯುಕ್ತ ಅನುಪಮ್ ಅಗ್ರವಾಲ್ ಅವರಿಂದ ಅಧಿಕಾರ ಸ್ವೀಕರಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಸ್ಪಿಯಾಗಿ ಕೆಲಸ ಮಾಡಿರುವುದರಿಂದ ಜಿಲ್ಲೆಯ ಪರಿಚಯ ಇದೆ. ಮಂಗಳೂರು ನಗರದ ಬಗ್ಗೆ ತಿಳಿದುಕೊಳ್ಳುತ್ತೇನೆ. ಕಾನೂನು ಎಲ್ಲರಿಗೂ ಒಂದೇ. ಇದರಲ್ಲಿ ತಾರತಮ್ಯ ಇಲ್ಲ. ಯಾರಿಗೂ ಯಾವುದೇ ಅನುಮಾನ ಬೇಡ. ಕಾನೂನು ಪ್ರಕಾರವಾಗಿ ಕರ್ತವ್ಯ ನಿರ್ವಹಿಸುತ್ತೇನೆ ಎಂದವರು ಪ್ರತಿಕ್ರಿಯಿಸಿದ್ದಾರೆ.