ಬಂಗ್ರಕೂಳೂರು ಗೋಲ್ಡ್ ಫಿಂಚ್ ಸಿಟಿ ರಾಮ - ಲಕ್ಷ್ಮಣ ಜೋಡುಕರೆ ಕಂಬಳ ಕೂಟದ ಫಲಿತಾಂಶ

mng-dec28-kambula 3
Published on

ಮಂಗಳೂರು: ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರ ಸಾರಥ್ಯದಲ್ಲಿ ಬಂಗ್ರಕೂಳೂರು ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆದ 8ನೇ ವರ್ಷದ ‘ರಾಮ-ಲಕ್ಷ್ಮಣ’ ಮಂಗಳೂರು ಕಂಬಳದ ಫಲಿತಾಂಶ ಪ್ರಕಟಗೊಂಡಿದೆ.

ಕೂಟದಲ್ಲಿ ಕನೆಹಲಗೆ: 7 ಜೊತೆ, ಅಡ್ಡಹಲಗೆ: 8 ಜೊತೆ, ಹಗ್ಗ ಹಿರಿಯ: 20 ಜೊತೆ,ನೇಗಿಲು ಹಿರಿಯ: 32 ಜೊತೆ, ಹಗ್ಗ ಕಿರಿಯ: 23 ಜೊತೆ, ನೇಗಿಲು ಕಿರಿಯ: 81 ಜೊತೆ ಸೇರಿದಂತೆ ಒಟ್ಟು 171 ಜೊತೆ ಕೋಣಗಳು ಭಾಗವಹಿಸಿದ್ದವು. ಕಳೆದ ವರ್ಷ ಈ ಸಂಖ್ಯೆ 170 ಆಗಿತ್ತು.

ಕನೆಹಲಗೆ: ( ಸಮಾನ ಬಹುಮಾನ ) ಬೊಳ್ಳಂಬಳ್ಳಿ ಶ್ರೀ ರಾಮ ಚೈತ್ರ ಪರಮೇಶ್ವರ ಭಟ್. ಹಲಗೆ ಮುಟ್ಟಿದವರು: ಭಟ್ಕಳ ಪಾಂಡು.ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿ - ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ, ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ - ಹಲಗೆ ಮುಟ್ಟಿದವರು: ಭಟ್ಕಳ ಪಾಂಡು, ವಾಮಂಜೂರು ತಿರುವೈಲುಗುತ್ತು ಅಭಿಷೇಕ್ ನವೀನ್ಚಂದ್ರ ಆಳ್ವ -ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ. ಬೋಳಾರ ತ್ರಿಶಾಲ್ ಕೆ ಪೂಜಾರಿ - ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಮುದ್ದುಮನೆ ಭರತ್ ನಾಯ್ಕ, ಬಾರ್ಕೂರು ಶಾಂತಾರಾಮ ಶೆಟ್ಟಿ - ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ, ನಿಡ್ಡೋಡಿ ಕಾನ ರಾಮ ಸುವರ್ಣ - ಹಲಗೆ ಮುಟ್ಟಿದವರು: ಕೊಕ್ಕರ್ಣೆ ವಡಾಪಿ ಸುರೇಶ್ ನಾಯ್ಕ.

ಅಡ್ಡ ಹಲಗೆ: ಪ್ರಥಮ: ನಾರಾವಿ ಯುವರಾಜ್ ಜೈನ್ ಕಂಬಳಾಭಿಮಾನಿ ವಕೀಲರ ವೃಂದ ಮಂಗಳೂರು ‘ಎ’ ಹಲಗೆ ಮುಟ್ಟಿದವರು: ಭಟ್ಕಳ ಹರೀಶ್, ದ್ವಿತೀಯ: ನಾರಾವಿ ಯುವರಾಜ್ ಜೈನ್ ಕಂಬಳಾಭಿಮಾನಿ ವಕೀಲರ ವೃಂದ ಮಂಗಳೂರು ‘ಬಿ’ ಹಲಗೆ ಮುಟ್ಟಿದವರು: ಭಟ್ಕಳ ಹರೀಶ್.

ಹಗ್ಗ ಹಿರಿಯ: ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ ಎ (11.86) ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ, ದ್ವಿತೀಯ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ ಬಿ (12.06) ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ.

ಹಗ್ಗ ಕಿರಿಯ: ಪ್ರಥಮ: ಮಾಳ ಕಲ್ಲೇರಿ ಭರತ್ ಶರತ್ ಶೆಟ್ಟಿ (11.72) ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ,

ದ್ವಿತೀಯ: 80 ಬಡಗ ಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ ಬಿ (11.90) ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ.

ನೇಗಿಲು ಹಿರಿಯ: ಪ್ರಥಮ: ಬೋಳದ ಗುತ್ತು ಸತೀಶ್ ಶೆಟ್ಟಿ ‘ಬಿ’ (11.53) ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ. ದ್ವಿತೀಯ: ಮಂಗಳೂರು ಬಜಾಲ್ ಶೈಲೇಶ್ ಶೆಟ್ಟಿ (11.59) ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ.

ನೇಗಿಲು ಕಿರಿಯ: ಪ್ರಥಮ: ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ ‘ಎ’ (11.80) ಓಡಿಸಿದವರು: ಪಟ್ಟೆ ಗುರು ಚರಣ್. ದ್ವಿತೀಯ: ಮುನಿಯಾಲು ಉದಯ ಕುಮಾರ್ ಶೆಟ್ಟಿ ‘ಎ’ (12.46) ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net