More

    75 ಮಂದಿ ಹೇಳಿಕೆ ದಾಖಲು

    ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನಾಕಾರರು ಮತ್ತು ಪೊಲೀಸರ ಮಧ್ಯೆ ಡಿ.19ರಂದು ಸಂಭವಿಸಿದ ಘರ್ಷಣೆ, ಗೋಲಿಬಾರ್‌ನಲ್ಲಿ ಮೃತಪಟ್ಟ ಜಲೀಲ್‌ನ ಸಂಬಂಧಿಕರು, ಪ್ರತ್ಯಕ್ಷದರ್ಶಿಗಳು, ಹಿಂದು ಸಂಘಟನೆಗಳ ಕಾರ್ಯಕರ್ತರ ಸಹಿತ 75 ಮಂದಿ ಲಿಖಿತ ಸಾಕ್ಷೃ ನೀಡಿದ್ದಾರೆ ಎಂದು ಮ್ಯಾಜಿಸ್ಟ್ರೀಯಲ್ ತನಿಖೆ ಜವಾಬ್ದಾರಿ ಹೊಂದಿರುವ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದರು.
    ಗೋಲಿಬಾರ್ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿ ನಗರದ ಮಿನಿ ವಿಧಾನ ಸೌಧದಲ್ಲಿರುವ ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತಾಲಯದ ನ್ಯಾಯಾಲಯದಲ್ಲಿ ಗುರುವಾರ ಮ್ಯಾಜಿಸ್ಟ್ರೀಯಲ್ ವಿಚಾರಣೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

    ಈ ತನಕ 201 ಮಂದಿ ಪ್ರತ್ಯಕ್ಷದರ್ಶಿಗಳು ಸಾಕ್ಷೃ ನೀಡಿದಂತಾಗಿದೆ. ಮೌಖಿಕವಾಗಿ ಸಾಕ್ಷಿ ಹೇಳಿಕೆ ನೀಡಲು ಬಂದಿದ್ದ 8 ಮಂದಿಗೆ ೆ.13ರಂದು ಅಫಿದಾವಿತ್ ಸಮೇತ ಬಂದು ಸಾಕ್ಷಿ ಹೇಳಲು ಅವಕಾಶ ನೀಡಲಾಗಿದೆ. ಘರ್ಷಣೆಗೆ ಸಂಬಂಧಿಸಿದ ವಿಡಿಯೋ ಹಾಗೂ ಸಿಸಿಟಿವಿ ದೃಶ್ಯಾವಳಿಯನ್ನು ಸಲ್ಲಿಸಲು ಫೆ.13ರಂದು ಸಾರ್ವಜನಿಕರು, ಮಾಧ್ಯಮ ಪ್ರತಿನಿಧಿಗಳಿಗೆ ಮತ್ತು ಪೊಲೀಸ್ ಇಲಾಖೆಗೆ ಅವಕಾಶ ಕಲ್ಪಿಸಲಾಗುವುದು. 13ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1.30ರ ತನಕ ಸಲ್ಲಿಸಬಹುದು. ಹೈಕೋರ್ಟ್ ನಿರ್ದೇಶನದ ಮೇರೆಗೆ ಪೊಲೀಸ್ ಇಲಾಖೆಯ ಹೇಳಿಕೆ ಹಾಗೂ ಸಿಸಿಟಿವಿ, ವಿಡಿಯೋ ದೃಶ್ಯಾವಳಿಯನ್ನು ಕೂಡ ಅಂದು ಸಲ್ಲಿಸಲು ಮಂಗಳೂರು ಪೊಲೀಸ್ ಆಯುಕ್ತರಿಗೆ ತಿಳಿವಳಿಕೆ ಪತ್ರ ಕಳುಹಿಸಲಾಗುವುದು ಎಂದು ಜಗದೀಶ್ ತಿಳಿಸಿದರು.
    ಮಂಗಳೂರು ದಕ್ಷಿಣ ಉಪ ವಿಭಾಗದ ಎಸಿಪಿ ಕೆ.ಯು. ಬೆಳ್ಳಿಯಪ್ಪ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts