ಸರ್ಕಾರಿ ನಿವೃತ್ತ ನೌಕರರಿಗೆ ನ್ಯಾಯ ಕಲ್ಪಿಸಿ ಪ್ರತಿಭಟನಾ ಸಭೆಯಲ್ಲಿ ಒಕ್ಕೊರಲ ಆಗ್ರಹ

blank

ಮಂಗಳೂರು: ಸುದೀರ್ಘ ಅವಧಿಗೆ ಸರ್ಕಾರದ ಕೆಲಸ ಮಾಡಿ ನಿವೃತ್ತರಾಗಿದ್ದೇವೆ. ನಮಗೆ ಸಿಗಬೇಕಾದ ಸೌಲಭ್ಯಗಳನ್ನು ಕಲ್ಪಿಸಿ ನ್ಯಾಯ ಒದಗಿಸಬೇಕು ಎಂದು ಸರ್ಕಾರಿ ನಿವೃತ್ತ ನೌಕರರ ವೇದಿಕೆ ಆಗ್ರಹಿಸಿದೆ.


ವಿಶ್ವ ಹಿರಿಯ ನಾಗರಿಕರ ದಿನಾಚರಣೆ ದಿನವಾದ ಮಂಗಳವಾರ ಮಿನಿ ವಿಧಾನಸೌಧ ಮುಂಭಾಗ ಕಪ್ಪು ಪಟ್ಟಿ ಧರಿಸಿ ನಡೆಸಿದ ಪ್ರತಿಟನಾ ಸಭೆಯಲ್ಲಿ ಮಾತನಾಡಿದ ಸರ್ಕಾರಿ ನಿವೃತ್ತ ನೌಕರರ ವೇದಿಕೆ ದ.ಕ. ಜಿಲ್ಲಾ ಪ್ರಧಾನ ಸಂಚಾಲಕ ಸಿರಿಲ್ ರಾಬರ್ಟ್ ಡಿಸೋಜ, ಜು.1,2022ರಿಂದ ಜು.31, 2024ರ ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ ಡಿ.ಸಿ.ಆರ್.ಜಿ, ಕಮ್ಯೂಟೇಶನ್, ಗಳಿಕೆ ರಜೆ ನಗದೀಕರಣದ ಮೊತ್ತವನ್ನು ಏಳನೇ ವೇತನ ಆಯೋಗದ ಲೆಕ್ಕಚಾರದಲ್ಲಿ ನೀಡಬೇಕು ಹಾಗೂ ಪರಿಷ್ಕೃತ ಆದೇಶ ನೀಡಬೇಕು ಎಂದು ಆಗ್ರಹಿಸಿದರು.


ಜಿಲ್ಲಾ ಸಂಚಾಲಕ ಸ್ಟ್ಯಾನಿ ತಾವ್ರೋ ಮಾತನಾಡಿ, ಸರ್ಕಾರಿ ನಿವೃತ್ತ ನೌಕರರು ಬೀದಿಗೆ ಇಳಿದು ಪ್ರತಿಭಟನೆ ನಡೆಸುವ ಸನ್ನಿವೇಶ ಎದುರಾಗಿರುವುದು ವಿಷಾದನೀಯ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯ ಕೊಡಬೇಕು ಎಂದರು.


ನಿವೃತ್ತ ಹಿರಿಯ ಸರ್ಕಾರಿ ನೌಕರರ ವಿಠಲ ಶೆಟ್ಟಿಗಾರ್ ಮಾತನಾಡಿ, ನಾನು ನಿವೃತ್ತನಾಗಿ ಬಹಳ ವರ್ಷಗಳು ಆಗಿದೆ. ಆದರೆ ನಿವೃತ್ತ ನೌಕರರಿಗೆ ಅನ್ಯಾಯವಾಗುತ್ತಿರುವುದನ್ನು ನೋಡಿ ಸುಮ್ಮನೆ ಇರಲು ಸಾಧ್ಯವಾಗದೇ ಪ್ರತಿಭಟನೆಗೆ ಬಂದಿದ್ದೇನೆ ಎಂದರು.


ಜಿಲ್ಲಾ ಸಂಚಾಲಕ ನಾರಾಯಣ ಪೂಜಾರಿ ಮಾತನಾಡಿ, ಸರ್ಕಾರಕ್ಕೆ ಇದು ಶೋಭೆ ತರುವ ಕೆಲಸವಲ್ಲ. ವಾವೇನೂ ಹೆಚ್ಚುವರಿ ಕೇಳುತ್ತಿಲ್ಲ. ಹಕ್ಕಿನಲ್ಲಿ ಇರುವ ಸವಲತ್ತನ್ನು ನ್ಯಾಯಯುತವಾಗಿ ನೀಡಿ ಎನ್ನುವುದು ನಮ್ಮ ಮನವಿ. ಸಮಸ್ಯೆಗೆ ಪರಿಹಾರ ನೀಡಲು ತಕ್ಷಣವೇ ಆದೇಶ ಮಾಡಬೇಕು. ಸಂಧ್ಯಾ ಕಾಲದಲ್ಲಿ ನಮಗೆ ಪ್ರತಿಭಟನೆಗೆ ಇಳಿಸುವುದು ಸರಿಯಲ್ಲ ಎಂದರು.


ಸಂಚಾಲಕರಾದ ಮಂಜುಳಾ ಜೀ ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು. ಪ್ರತಿಭಟನೆಯ ಬಳಿಕ ಸಂಚಾಲಕರು ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಅವರಿಗೆ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಹಿರಿಯ ಸರ್ಕಾರಿ ನೌಕರರಾದ ವಿಜಯ ಪೈ, ಮೋಹನ ಬಂಗೇರ, ಎನ್. ಆನಂದ ನಾಯ್ಕ, ಹೇಮನಾಥ, ಜೆರಾಲ್ಡ್, ಭಾರತಿ ಪಿ.ವಿ ಮೊದಲಾದವರು ಉಪಸ್ಥಿತರಿದ್ದರು.

ನ್ಯಾಯ ಸಿಗದಿದ್ದರೆ ಕಾನೂನು ಹೋರಾಟ
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅ.2ರಂದು ನಿವೃತ್ತ ಸರ್ಕಾರಿ ನೌಕರರು ಉಪವಾಸ ಸತ್ಯಾಗ್ರಹವನ್ನು ಕೈಗೊಂಡಿದ್ದಾರೆ. ಮುಂದೆ ಬೆಳಗಾವಿಯಿಂದ ಬೆಂಗಳೂರು ವಿಧಾನ ಸೌಧ ತನಕ ಪಾದಯಾತ್ರೆ ನಡೆಸಲಾಗುವುದು. ಆದರೂ ಸರ್ಕಾರ ಸರಿಯಾದ ಕ್ರಮ ಜರುಗಿಸದೇ ಹೋದಲ್ಲಿ ಕಾನೂನು ಕ್ರಮಕ್ಕೆ ಮುಂದಾಗುತ್ತೇವೆ ಎಂದು ಜಿಲ್ಲಾ ಪ್ರಧಾನ ಸಂಚಾಲಕ ಸಿರಿಲ್ ರಾಬರ್ಟ್ ಡಿಸೋಜ ತಿಳಿಸಿದ್ದಾರೆ.

blank
Share This Article

ಬೇಸಿಗೆಯಲ್ಲಿ ಕೋಳಿ ಅಥವಾ ಮೀನು?; ತಿನ್ನಲು ಯಾವ ಮಾಂಸ ಉತ್ತಮ? ಇಲ್ಲಿದೆ ಮಾಹಿತಿ.. | Meat

Meat : ಸಾಮಾನ್ಯವಾಗಿ ಬೇಸಿಗೆಯಲ್ಲಿ ಅಧಿಕ ಜನರು ತಂಪುಪಾನಿಯಗಳನ್ನು ಸೇವಿಸುತ್ತಾರೆ. ಈ ಸಮಯದಲ್ಲಿ ಹೆಚ್ಚಿನವರು ಹಗುರವಾದ(ಮೃದುವಾದ)…

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…