ಶರವು ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮೈಸೂರಿನ ಸುತ್ತೂರು ಮಠದ ಮಠಾಧೀಶ ಡಾ. ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಭೇಟಿ

mng---5 Jan Sharavu
Published on

ಮಂಗಳೂರು: ನಗರದ ಶರವು ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮೈಸೂರಿನ ಸುತ್ತೂರು ಮಠದ ಮಠಾಧೀಶ ಡಾ. ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಭೇಟಿ ನೀಡಿದ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ಕ್ಷೇತ್ರಕ್ಕೆ ಭೇಟಿ ನೀಡಿದ ಶ್ರೀಗಳನ್ನು ಶರವು ಕ್ಷೇತ್ರದ ಶಿಲೆಶಿಲೆ ಆಡಳಿತ ಮೊಕ್ತೇಸರ ಶರವು ರಾಘವೇಂದ್ರ ಶಾಸಿ ಬರಮಾಡಿಕೊಂಡರು. ಬಳಿಕ ಕ್ಷೇತ್ರದ ಹಿನ್ನಲೆ, ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮ ಬಗ್ಗೆ ವಿವರ ಪಡೆದುಕೊಂಡರು. ಈ ಸಂದರ್ಭ ರಾಘವೇಂದ್ರ ಶಾಸಿಗಳು ಸುತ್ತೂರು ಕ್ಷೇತ್ರದಿಂದ ನಡೆಯುವ ಶಿಕ್ಷಣ ಹಾಗೂ ಸಮಾಜಮುಖಿ ಕಾರ್ಯದ ಶ್ರೇಯಸ್ಸಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದರು.

ಈ ಸಂದರ್ಭ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಡಾ. ಸುದೇಶ್ ಶಾಸಿ, ದೇವಸ್ಥಾನದ ಅರ್ಚಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net