

ಸುಳ್ಯ: ಕನಕಮಜಲು ಗ್ರಾಮದ ಕೋಡಿ ತಿರುವಿನಲ್ಲಿ ಗುರುವಾರ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕಾಂಪೌಂಡ್‌ಗೆ ಢಿಕ್ಕಿ ಹೊಡೆದು ಬಳಿಕ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಗುದ್ದಿದೆ.
ಕಾರು ಕುಂದಾಪುರದಿಂದ ಮಡಿಕೇರಿಗೆ ತೆರಳುತ್ತಿದ್ದು, ಕೋಡಿ ತಿರುವಿನಲ್ಲಿ ಮುಂಜಾನೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ರವಿಪ್ರಕಾಶ್ ಬುಡ್ಲೆಗುತ್ತು ಅವರ ಕಾಂಪೌಂಡ್‌ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಸಮೀಪವಿದ್ದ ವಿದ್ಯುತ್ ಕಂಬ ಮುರಿದು ರಸ್ತೆಗೆ ಬಿದ್ದ ಹಿನ್ನೆಲೆಯಲ್ಲಿ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಕಾರಿನಲ್ಲಿ ಚಾಲಕ ಸೇರಿದಂತೆ ಮೂವರು ಪ್ರಯಾಣಿಕರಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಘಟನೆಯ ಬಳಿಕ ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕಾಗಮಿಸಿ ವಿದ್ಯುತ್ ಕಂಬ ದುರಸ್ತಿಗೊಳಿಸಿದರು.