ಆರೋಗ್ಯಕರ ಜೀವನಕ್ಕೆ ಸಂಗೀತ ಕಲೆ ಪೂರಕ– ಸ್ವರ ಸಾನಿಧ್ಯ ರಾಷ್ಟ್ರೀಯ ಮಟ್ಟದ ಯುವ ಸಂಗೀತೋತ್ಸವದಲ್ಲಿ ಪಾಲೆಮಾರ್ ಅಭಿಮತ

blank

 

ಮಂಗಳೂರು: ಆರೋಗ್ಯಕರ ಜೀವನಕ್ಕೆ ಸಂಗೀತ ಕಲೆ ಪೂರಕವಾಗಿದೆ ಎಂದು ಮಾಜಿ ಸಚಿವ ಕಷ್ಣ ಜೆ ಪಾಲೆಮಾರ್ ಹೇಳಿದರು.

ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ಹಮ್ಮಿಕೊಂಡ ಸ್ವರ ಸಾನಿಧ್ಯ ರಾಷ್ಟ್ರೀಯ ಮಟ್ಟದ ಯುವ ಸಂಗೀತ ಉತ್ಸವದಲ್ಲಿ ಕಲಾವಿದರನ್ನು ಸನ್ಮಾನಿಸಿ ಅವರು ಮಾತನಾಡಿದರು..

ಯುವ ಪೀಳಿಗೆಯಲ್ಲಿ ಸಂಗೀತದ ಬಗ್ಗೆ ಅಭಿರುಚಿ ಮೂಡಿಸುವ ನಿಟ್ಟಿನಲ್ಲಿ ಸ್ವರ ಸಾನಿಧ್ಯ ರಾಷ್ಟ್ರೀಯ ಸಂಗೀತೋತ್ಸವ ಗಮನಾರ್ಹ ವಾಗಿದೆ. ಸಂಗೀತಕ್ಕೆ ಅದ್ಭುತ ವಾದ ಶಕ್ತಿಯಿದೆ. ಪಶು ಪಕ್ಷಿಗಳು, ಗಿಡಗಳು ಸಂಗೀತಕ್ಕೆ ಸ್ಪಂದಿಸುತ್ತವೆ ಎನ್ನುವುದನ್ನು ಕೇಳಿದ್ದೇನೆ. ಮನುಷ್ಯನ ಆರೋಗ್ಯದ ಮೇಲೂ ಸಂಗೀತ ಕೇಳುವುದರಿಂದ ಉತ್ತಮ ಪರಿಣಾಮ ಬೀರುತ್ತದೆ. ಸಂಗೀತದ ಬಗ್ಗೆ ಸಮಾಜದಲ್ಲಿ ಅದರಲ್ಲೂ ಯುವ ಜನರಲ್ಲಿ ಇನ್ನಷ್ಟು ಜಾಗೃತಿ ಮೂಡಿಸುವ ಕೆಲಸವಾಗಲಿ ಎಂದು ಶುಭ ಹಾರೈಸಿದರು.

ಶಾಸಕ ವೇದವ್ಯಾಸ ಕಾಮತ್, ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ, ಉದ್ಯಮಿ ಪುಷ್ಪರಾಜ್ ಜೈನ್, ಐಡಿಯಲ್ ಐಸ್ ಕ್ರೀಮ್ ಆಡಳಿತ ನಿರ್ದೇಶಕ ಮುಕುಂದ ಕಾಮತ್, ಸ್ವಸ್ತಿಕ್ ನ್ಯಾಷನಲ್ ಬ್ಯುಸಿನೆಸ್ ಸ್ಕೂಲ್ ನ ಅಧ್ಯಕ್ಷ ರಾಘವೇಂದ್ರ ಹೊಳ್ಳ,ಮೈಸೂರು ಎಲೆಕ್ಟ್ರಿಕಲ್ ಕಂಪೆನಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ರೈ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಜ್ಯೋತಿಷಿ ಅಶ್ವಿನ್ ಶರ್ಮಾ,ಓಶಿಯನ್ ಪರ್ಲ್ ಸಂಸ್ಥೆಯ ಉಪಾಧ್ಯಕ್ಷ ಗಿರೀಶ್, ನಗರ ಉಪ ಪೊಲೀಸ್ ಆಯುಕ್ತ ರವಿಶಂಕರ್, ಕಲಾಸಾಧನ ಸಂಸ್ಥೆಯ ನಿರ್ದೇಶಕಿ ವಿಭಾ ಶ್ರೀನಿವಾಸ ನಾಯಕ್, ಅಶ್ವಿನ್ ಶರ್ಮಾ ಮೊದಲಾದವರು ಉಪಸ್ಥಿತರಿದ್ದರು.

ಶ್ರೀನಿವಾಸ ನಾಯಕ್ ಸ್ವಾಗತಿಸಿದರು, ಭಾಸ್ಕರ್ ರೈ ಕಟ್ಟ ವಂದಿಸಿದರು. ಪುಷ್ಪರಾಜ್ ಬಿ.ಎನ್. ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಕೊಲ್ಕತ್ತಾದ ಅರಣ್ಯ ಚೌಧರಿಯವರಿಂದ ಸಂತೂರ್ ವಾದನ ಮತ್ತು ಕೊಲ್ಕತ್ತಾದ ಪಿಂಟೂದಾಸ್ ಅವರ ತಬಲಾಸಾಥ್‌ನೊಂದಿಗೆ ಹಿಂದೂಸ್ತಾನಿ ಕಚೇರಿ ನಡೆಯಿತು. ಧಾರಾವಾಡ ಜಿಲ್ಲೆಯ ಮಾನ್ವಿ ತಾಲೂಕಿನ ಬಸವರಾ ವಂದಲಿ ಮತ್ತು ಸಂಗಡಿಗರು ಹಿಂದೂಸ್ತಾನಿ ಸಂಗೀತ ಕಚೇರಿ ನಡೆಸಿಕೊಟ್ಟರು. ಹೇಮಂತ್ ಭಾಗ್ ವತ್ ಹಾರ್ಮೋನಿಯಂ ಮತ್ತು ವಿಘ್ನೇಶ್ ಪ್ರಭು ತಬಲಾ ಸಾಥ್ ನೀಡಿದರು. ಮೇದಾ ಜಿ.ಭಟ್ , ಹಾರ್ಮೋನಿಯಂ, ಅನ್ವೇಷಾ ನಾಯಕ್ ಮತ್ತು ಶ್ರುತಿ ಪ್ರಭು ತಾನ್ಪೂರ ವಾದನದಲ್ಲಿ ಸಹಕರಿಸಿದರು. ಸುಕನ್ಯಾ ಕಾಮತ್ ಕಾರ್ಯಕ್ರಮ ನಿರೂಪಿಸಿದರು.

Share This Article

ಆರ್ಥಿಕ ಸಮಸ್ಯೆಗಳಿಂದ ಬಳಲುತ್ತಿದ್ದೀರಾ? ಹಾಗಿದ್ರೆ ಭಾನುವಾರ ಹೀಗೆ ಮಾಡಿ ನೋಡಿ…devotional

devotional:ಭಾನುವಾರ ಸೂರ್ಯ ದೇವನನ್ನು ಪೂಜೆ ಮಾಡುವುದರಿಂದ ಮತ್ತು ಸೂರ್ಯ ಮಂತ್ರಗಳನ್ನು ಪಠಿಸುವುದರಿಂದ ಜೀವನದಲ್ಲಿ ಸಂತೋಷ, ಸಮೃದ್ಧಿ…

ಸುಡು ಬೇಸಿಗೆಯಲ್ಲಿ ಆರೋಗ್ಯ ನಿಮ್ಮ ಕೈಯಲ್ಲಿ! ಈ ಟಿಪ್ಸ್​ ತಪ್ಪದೇ ಫಾಲೋ ಮಾಡಿ, ಇಲ್ಲದಿದ್ರೆ ಆರೋಗ್ಯಕ್ಕೆ ಡೇಂಜರ್​ | Summer Tips

Summer Tips : ಎಲ್ಲೆಡೆ ಬೇಸಿಗೆ ಆರಂಭವಾಗಿದೆ. ಸೂರ್ಯನ ಪ್ರಖರವಾದ ಕಿರಣಗಳು ನಮ್ಮ ನೆತ್ತಿಯನ್ನು ಸುಡುತ್ತಿದೆ.…

ಈ 3 ರಾಶಿಯವರು ಹಣಕ್ಕಿಂತಲೂ ಪ್ರೀತಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಾರಂತೆ! ನಿಮ್ಮ ರಾಶಿ ಯಾವುದು? Zodiac Signs

Zodiac Signs : ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು…