ಸುರತ್ಕಲ್ ಶ್ರೀ ಮಹಾಲಿಂಗೇಶ್ವರ ಆಂಗ್ಲ ಮಾಧ್ಯಮ ಶಾಲೆ ಮಳೆ ನೀರು ಕೊಯ್ಲು ಯಂತ್ರೋಪಕರಣ ಘಟಕದ ಉದ್ಘಾಟನೆ

mng--25 march Rotary surathkal
Published on

ಮಂಗಳೂರು : ರೋಟರಿ ಸಂಸ್ಥೆಯು ಸಮಾಜದಲ್ಲಿರುವ ಆರ್ಥಿಕವಾಗಿ ಹಿಂದುಳಿದ ವರ್ಗದವರ ಮೂಲಭೂತ ಸೌಕರ್ಯಕ್ಕೆ ಸ್ಪಂದಿಸುತ್ತಿದ್ದು, ಸಮಾಜದ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ರೋಟರಿ ಜಿಲ್ಲಾ 3181ರ ಗವರ್ನರ್‌ರಾದ ವಿಕ್ರಮ್ ದತ್ತ ಹೇಳಿದರು.

ರೋಟರಿ ಕ್ಲಬ್ ಸುರತ್ಕಲ್ ಹಾಗೂ ರೋಟರಿ ಕ್ಲಬ್ ಮಂಗಳೂರು ಸಿಟಿ ಜಂಟಿ ಆಶ್ರಯದಲ್ಲಿ ಸೋಮವಾರ ಸುರತ್ಕಲ್‌ನ ಶ್ರೀ ಮಹಾಲಿಂಗೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಶ್ರೀ ವಿದ್ಯಾ ವಿನಾಯಕ ಆವರಣದಲ್ಲಿ ರೋಟರಿ ಸಂಸ್ಥೆಯು ನಿರ್ಮಿಸಿದ 2 ಲಕ್ಷ ರೂ. ಮೌಲ್ಯದ ಮಳೆ ನೀರು ಕೊಯ್ಲಿನ ಯಂತ್ರೋಪಕರಣ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.

ರೋಟರಿ ಸಂಸ್ಥೆಯವರು ಶಾಲೆಗೆ ದಾನದ ರೂಪದಲ್ಲಿ ನೀಡಿದ 40 ಸಾವಿರ ರೂ. ಮೌಲ್ಯದ ದೃಶ್ಯ ಮತ್ತು ಶ್ರಾವ್ಯ ಮಾಧ್ಯಮ ಉಪಕರಣವನ್ನು ಶಾಲೆಯ ಮುಖ್ಯ ಶಿಕ್ಷಕಿ ನಾಗವೇಣಿ ಮತ್ತು ಮಾಲಿನಿ ಬಂಗೇರ ಅವರಿಗೆ ಹಸ್ತಾಂತರಿಸಿದರು.

ದ.ಕ. ಜಿಲ್ಲಾ ನಿರ್ಮಿತಿ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕರಾದ ರಾಜೇಂದ್ರ ಕಲ್ಬಾವಿ ಅತಿಥಿಯಾಗಿದ್ದರು. ಮಳೆ ನೀರನ್ನು ಸಂಗ್ರಹಿಸಿ ನೀರಿನ ಅಭಾವವನ್ನು ಪರಿಹರಿಸಬೇಕೆಂದು ಸಲಹೆ ನೀಡಿದರು.

ಶಾಲಾ ಆಡಳಿತ ಸಮಿತಿಯ ಅಧ್ಯಕ್ಷರಾದ ರಮಾನಂದ ರಾವ್, ರೋಟರಿ ವಲಯ ಸಹಾಯಕ ಗವರ್ನರ್ ಡಾ. ರಂಜನ್ ಮತ್ತು ಕೆ.ಎಂ.ಹೆಗ್ಡೆ ಉಪಸ್ಥಿತರಿದ್ದರು.

ರೋಟರಿ ಕ್ಲಬ್ ಸುರತ್ಕಲ್‌ನ ಅಧ್ಯಕ್ಷರಾದ ಸಂದೀಪ್ ರಾವ್ ಸ್ವಾಗತಿಸಿದರು. ರೋಟರಿ ಕ್ಲಬ್ ಸಿಟಿ ಸಂಸ್ಥೆಯ ಅಧ್ಯಕ್ಷರಾದ ಗಣೇಶ್ ಕೊಡ್ಲಮೊಗರು ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net