ಹೋಟೆಲ್ ವುಡ್‌ಲ್ಯಾಂಡ್ಸ್ ರಾಜಸ್ಥಾನಿ ಕರಕುಶಲ ಮೇಳ ಆರಂಭ

mng-apr20-exhibition1
Published on

ಮಂಗಳೂರು : ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್‌ರವರ ಸಂಯೋಜನೆಯಲ್ಲಿ ರಾಜಸ್ಥಾನದ ವಿವಿಧ ಕರಕುಶಲ ವಸ್ತುಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ ಶನಿವಾರ ಆರಂಭಗೊಂಡಿದೆ.


ನಟ, ನಿರ್ದೇಶಕ ದೇವದಾಸ್ ಕಾಪಿಕಾಡ್ ಅವರು ಮೇಳವನ್ನು ಉದ್ಘಾಟಿಸಿದರು. ರಾಜಸ್ಥಾನ, ಸಿಕ್ಕಿಂ, ಓರಿಸ್ಸಾ, ಕಾಶ್ಮೀರ ಸೇರಿದಂತೆ ವಿವಿಧ ರಾಜ್ಯಗಳ ಅನೇಕ ಮಂದಿ ಕುಶಲಕರ್ಮಿಗಳು ತಾವೇ ಸ್ವತಃ ತಯಾರಿಸಿದಂತಹ ಕೈಮಗ್ಗದ ಸೀರೆ, ಸಿಲ್ಕ್ ಸೀರೆಗಳು, ಅಭರಣಗಳು ಮತ್ತು ಕರಕುಶಲ ವಸ್ತುಗಳನ್ನು ಮಂಗಳೂರಿಗೆ ತಂದು ಇಲ್ಲಿ ಮಾರಾಟ ಮತ್ತು ಪ್ರದರ್ಶನವನ್ನು ಹಮ್ಮಿಕೊಂಡಿದ್ದಾರೆ. ಈ ಕುಶಲಕರ್ಮಿಗಳಿಗೆ ನಮ್ಮ ಕರಾವಳಿಯ ಜನತೆ ಉತ್ತಮ ಬೆಂಬಲ ನೀಡುವ ಮೂಲಕ ಅವರನ್ನು ಪ್ರೋತ್ಸಾಹಿಸಬೇಕು ಎಂದರು.


ಮೇಳದ ಆಯೋಜಕ ಪ್ರಮೋದ್ ಸಿಂಗ್ ಮಾತನಾಡಿ, ಈ ಗ್ರಾಮೀಣ ಮೇಳದಲ್ಲಿ ರಾಜಸ್ಥಾನ ಸೇರಿದಂತೆ ವಿವಿಧ ರಾಜ್ಯಗಳ ಕೈಮಗ್ಗದ ಸೀರೆ ಹಾಗೂ ಸಿಲ್ಕ್ ಸೀರೆಗಳು ಮತ್ತು ಕರಕುಶಲ ವಸ್ತುಗಳ ಬೃಹತ್ ಸಂಗ್ರಹವಿದ್ದು, ಮಾರಾಟ ಮತ್ತು ಪ್ರದರ್ಶನ ನಡೆಯಲಿದೆ. ರಾಜಸ್ಥಾನ ಸಿಲ್ಕ್ ಸಾರಿ, ಮೈಸೂರ್ ಸಿಲ್ಕ್ ಸಾರಿ, ಓರಿಸ್ಸಾ ಸಿಲ್ಕ್ ಸೀರೆಗಳು, ಕಾಂತ ವರ್ಕ್ ಸಿಲ್ಕ್ ಸೀರೆಗಳು, ಕೋಸಿಯಾ ಕೈ ಮಗ್ಗದ ಸೀರೆಗಳು, ಬಾಗಲ್ಪುರ್ ಸಿಲ್ಕ್ ಸೀರೆಗಳು, ಬನರಸ್ ಸಿಲ್ಕ್ ಸಾರಿ, ವೆಜ್ ಡೈ ಬ್ಲಾಕ್ ಪ್ರಿಂಟೆಡ್ ಸೀರೆಗಳು, ಮಧುರೈ ಸುಗುಡಿ ಕಾಟನ್ ಸೀರೆಗಳು, ಸಾಂಬ್ಲಪುರಿ ಇಕ್ತಾ ಸೀರೆಗಳು, ಕೈ ಮಗ್ಗದ ಕಾಟನ್ ಸೀರೆಗಳು, ಚಾಂದಾರ್ ಕಾಟನ್ ಸೀರೆಗಳು, ಪೌಂಚಪಲ್ಲಿ ಕೈ ಮಗ್ಗದ ಸೀರೆಗಳು, ಫೋಲ್ಕರಿ ವಿನ್ಯಾಸದ ಪಾಟಿಯಾಲ, ಫೋಲ್ಕರಿ ಬೆಡ್‌ಶೀಟ್‌ಗಳು, ಹಾಗೂ ಸೋಫಾ ಸೆಟ್ ಕವರ್, ಸಿಲ್ಕ್ ಕುಶನ್ ಕವರ್, ರಾಜಸ್ಥಾನ್ ಬೆಡ್‌ಶೀಟ್‌ಗಳು ಹಾಗೂ ಇನ್ನಿತರ ಕೈಮಗ್ಗದ ಸೀರೆಗಳು ಇಲ್ಲಿ ಲಭ್ಯವಿದೆ ಎಂದರು.


ಜೋಧ್ಪುರ್ ಕರಕುಶಲ ಮರದ ಪಿಠೋಪರಣಗಳು, ಸಾರಂಗ್ಪುರ್ ಮರದ ಪಿಠೋಪರಣಗಳು, ಹೈದಾರ್ಬಾದ್ ಕಪ್ಪು ಮೇಟಲ್‌ಮ ವಿಗ್ರಹಗಳು, ಹಿತ್ತಾಳೆಯ ಕಲಾಕೃತಿಗಳು, ವಿಶೇಷ ಶೈಲಿಯ ಜೈಪುರ್ ಆಭರಣಗಳು, ವಿಶೇಷ ವಿನ್ಯಾಸದ ವೈವಿಧ್ಯಮಯ ಮಣ್ಣಿನ ವಿಗ್ರಹಗಳು, ನೀಲಿ ಬಣ್ಣದ ಕ್ರಾಕಾರಿ ಐಟಮ್‌ಗಳ ಬೃಹತ್ ಸಂಗ್ರಹ ಇಲ್ಲಿವೆ ಎಂದು ಪ್ರಮೋದ್ ಸಿಂಗ್ ವಿವರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net