ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್‌ಗೆ ಮಂಗಳೂರು ಸಜ್ಜು- ಸಿಎಂ ಉದ್ಘಾಟನೆ

Mng-oct26-badmiton4
Published on

ಮಂಗಳೂರು: ನಗರದ ಉರ್ವದ ಒಳಾಂಗಣ ಕ್ರೀಡಾಂಗಣದಲ್ಲಿ ಚೀಫ್ ಮಿನಿಸ್ಟರ್ ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ 2025 ಅಂತಾರಾಷ್ಟೀಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ ಅ.27ರಿಂದ ನ.2ರ ತನಕ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ರಾಜ್ಯದಲ್ಲೇ ಮೊದಲ ಬಾರಿಗೆ ನಡೆಯುವ ಈ ಪಂದ್ಯಾವಳಿಗೆ ಮಂಗಳೂರು ಸಜ್ಜಾಗಿದೆ. ಅ.27ರಂದು ಸಿಎಂ ಸಿದ್ದರಾಮಯ್ಯ ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ. ಸ್ಪೀಕರ್ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದ ಕ್ಯಾ.ಬ್ರಿಜೇಶ್ ಚೌಟ ಸಹಿತ ಗಣ್ಯರು ಭಾಗವಹಿಸಲಿದ್ದು, ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.

ಭಾರತೀಯ ಬ್ಯಾಡ್ಮಿಂಟನ್ ಅಸೋಸಿಯೇಶನ್, ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಶನ್ ಮಾರ್ಗದರ್ಶನದಲ್ಲಿ ದ.ಕ. ಬ್ಯಾಡ್ಮಿಂಟನ್ ಅಸೋಸಿಯೇಶನ್ ಪಂದ್ಯಾವಳಿಯ ಆತಿಥ್ಯ ವಹಿಸಿದೆ. ಆರು ದಿನಗಳ ಕಾಲ ನಡೆಯುವ ಪಂದ್ಯಾವಳಿಗೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ನೇತೃತ್ವದಲ್ಲಿ ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಶನ್ ಗೌರವಾಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ಪಂದ್ಯಾವಳಿಗೆ ಸಿದ್ಧತೆ ನಡೆದಿದೆ.

ಸಾರ್ವಜನಿಕರಿಗೆ ಉಚಿತ ಪ್ರವೇಶ: ಕ್ರೀಡಾಕೂಟಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಇದ್ದು, ಸಾರ್ವಜನಿಕರ ವಾಹನಗಳಿಗೆ ಉರ್ವಾ ಮಾರ್ಕೆಟ್ ಕ್ರೀಡಾಂಗಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಬಿಂಬಿಸುವ ಪ್ರದರ್ಶನ ಹಾಗೂ ಮಾಹಿತಿ ಕೇಂದ್ರ ಸಿದ್ದಗೊಂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net