ಮಂಗಳೂರು: ಪ್ರಿಯತಮನೆದುರೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಮಂಗಳೂರು: ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಕಳೆದ 18ನೇ ತಾರೀಖಿನಂದು ನಗರದ ಹೊರವಲಯದ ಬೆಂಗ್ರೆ ಬೀಚ್​ ಬಳಿ ನಡೆದಿದೆ ಎನ್ನಲಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಪೈಶಾಚಿಕ ಕೃತ್ಯ ರಾಷ್ಟ್ರ ರಾಜಧಾನಿಯಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಿದೆ.

ಬಂಟ್ವಾಳ ಮೂಲದ ಯುವಜೋಡಿ ವಿಹಾರಕ್ಕೆಂದು ಕಳೆದ 18ರಂದು ಬೆಂಗ್ರೆ ಕಡಲ ತೀರಕ್ಕೆ ಬಂದಿದ್ದರು. ಈ ವೇಳೆ ಏಳು ಮಂದಿ ದುಷ್ಕರ್ಮಿಗಳ ಕಣ್ಣು ಯುವ ಜೋಡಿಯ ಮೇಲೆ ಬಿದ್ದಿದೆ. ಅವರ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳು ಸಂತ್ರಸ್ತ ಯುವತಿಯ ಪ್ರಿಯತಮನನ್ನು ಕಟ್ಟಿ ಹಾಕಿ ಅವನೆದುರೇ ಯುವತಿಯ ಮೇಲೆ ಸಾಮೂಹಿಕವಾಗಿ ಅತ್ಯಚಾರ ಎಸಗಿದ್ದಾರೆ ಎಂದು ಹೇಳಲಾಗಿದೆ.

ಮೊಬೈಲ್ ನಂಬರ್ ಮೂಲಕ ಆರೋಪಿಗಳನ್ನು ಪತ್ತೆ ಹಚ್ಚಿರುವ ಪೊಲೀಸರು ಆರು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ನಡೆಸುತ್ತಿರುವ ತನಿಖೆ ಮುಂದುವರಿಸಿದ್ದಾರೆ. ಈ ಸಂಬಂಧ ಮಂಗಳೂರಿನ ಮಹಿಳಾ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)