ಟೇಕಾಫ್​ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ; ತಪ್ಪಿದ ದುರಂತ

flight
Published on

ಮಂಗಳೂರು: ಟೇಕಾಫ್​ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗುವುದರ ಜೊತೆಗೆ ಭಾರೀ ಅವಘಡವೊಂದು ಫೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಪ್ರಯಾಣಿಕರ ಸಹಿತ ಬೆಳಗ್ಗೆ 8.30ರ ಸುಮಾರಿಗೆ ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನ, ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿತ್ತು. ವಿಮಾನ ಇನ್ನೇನು ಕೆಲವೇ ಕ್ಷಣಗಳಲ್ಲಿ ಟೇಕಾಫ್ ಆಗುವ ಸಿದ್ದತೆಯಲ್ಲಿತ್ತು. ಈ ವೇಳೆ ಏಕಾಏಕಿಯಾಗಿ ವಿಮಾನದ ರೆಕ್ಕೆಯ ಭಾಗಕ್ಕೆ ಹಕ್ಕಿ ಡಿಕ್ಕಿ ಹೊಡೆದಿದ್ದು, ರೆಕ್ಕೆಯ ಇಂಜಿನ್ ಭಾಗದಲ್ಲಿ ಶಬ್ದ ಉಂಟಾಗಿ ತಾಂತ್ರಿಕ ಸಮಸ್ಯೆಯ ಸೂಚನೆ ಕೊಟ್ಟಿದೆ ಎನ್ನಲಾಗಿದೆ.

ಪೈಲಟ್, ಟೇಕಾಫ್ ಕ್ಯಾನ್ಸಲ್ ಮಾಡಿ ರನ್ ವೇನಿಂದ ವಾಪಾಸ್ ಬಂದಿದ್ದಾರೆ. ಸದ್ಯ ಪ್ರಯಾಣಿಕರನ್ನ ಇಳಿಸಿ ವಿಮಾನದ ತಪಾಸಣೆ ನಡೆಸಿ ಮತ್ತೊಂದು ವಿಮಾನದ ಮೂಲಕ ಪ್ರಯಾಣಿಕರಿಗೆ ದುಬೈಗೆ ತೆರಳಲು ವ್ಯವಸ್ಥೆ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net