26.3 C
Bengaluru
Thursday, January 23, 2020

ಆನ್‌ಲೈನ್ ಬೆಟ್ಟಿಂಗ್ ಇಬ್ಬರ ಬಂಧನ

Latest News

ನಂದಿಬೆಟ್ಟದ ತುದಿಗೆ ವಾರದ 5 ದಿನಗಳು ವಾಹನಗಳ ಪ್ರವೇಶಕ್ಕೆ ನಿರ್ಬಂಧ: ಶನಿವಾರ, ಭಾನುವಾರ ಮಾತ್ರ ಪ್ರವೇಶ

ಚಿಕ್ಕಬಳ್ಳಾಪುರ: ರಾಜ್ಯದ ಪ್ರಖ್ಯಾತ ಪ್ರವಾಸಿ ತಾಣ ನಂದಿ ಬೆಟ್ಟದ ತುತ್ತ ತುದಿಗೆ ವಾರದ 5 ದಿನಗಳು ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಬೆಟ್ಟದ ಪ್ರವೇಶ ದ್ವಾರದ...

ತಾಯಿ-ಮಗಳು ಅನುಮಾನಾಸ್ಪದ ಸಾವು; ಬಾವಿಯಲ್ಲಿ ಪತ್ತೆಯಾದವು ಶವಗಳು, ಮಹಿಳೆಯ ಪತಿ ನಾಪತ್ತೆ

ಕೊಡಗು: ಆಸ್ಸಾಂ ಮೂಲದ ತಾಯಿ-ಮಗಳು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ವಿರಾಜಪೇಟೆ ತಾಲೂಕಿನ ಕೆ.ಬೈಗೋಡಿನಲ್ಲಿ ನಡೆದಿದೆ. ಇವರಿಬ್ಬರ ಶವವೂ ಬಾವಿಯಲ್ಲಿ ಪತ್ತೆಯಾಗಿದೆ. ಮಹಿಳೆಯ ಪತಿ ನಾಪತ್ತೆಯಾಗಿದ್ದು ಇನ್ನೂ ಅನುಮಾನವನ್ನು...

ಸೌದಿಯಲ್ಲಿರುವ ಕೇರಳದ 30 ನರ್ಸ್​ಗಳಲ್ಲಿ ಮಾರಣಾಂತಿಕ ಕರೋನಾ ವೈರಸ್​ ಪತ್ತೆ

ತಿರುವನಂತಪುರ: ಚೀನಾದಲ್ಲಿ ಹಲವು ಮಂದಿಯನ್ನು ಬಲಿ ಪಡೆದಿರುವ ಮಾರಣಾಂತಿಕ ಕರೋನಾ ವೈರಸ್​ ಸೌದಿ ಅರೇಬಿಯಾದಲ್ಲಿರುವ ಕೇರಳದ 30 ಮಂದಿ ನರ್ಸ್​ಗಳಲ್ಲಿ ಪತ್ತೆಯಾಗಿದೆ ಎಂದು...

ರೈಲು ಸಂಚಾರ ನಿರಂತರ

ಶಿವಮೊಗ್ಗ: ಶಿವಮೊಗ್ಗದಲ್ಲಿ ಆರಂಭವಾದ ಎಲ್ಲ ತತ್ಕಾಲ್ ರೈಲುಗಳು ಶಾಶ್ವತವಾಗಿ ಸಂಚರಿಸುತ್ತಿವೆ. ಈಗ ಆರಂಭವಾಗಿರುವ ಶಿವಮೊಗ್ಗ-ಯಶವಂತಪುರ ಎಕ್ಸ್​ಪ್ರೆಸ್ ರೈಲು ಕೂಡ ಮುಂದಿನ ದಿನಗಳಲ್ಲಿ ನಿರಂತರವಾಗಿ...

ಶೇ.50 ರಷ್ಟು ಕರ ವಸೂಲಿ ಮಾಡದಿದ್ದರೆ ಶಿಸ್ತು ಕ್ರಮ

ಬಾಗಲಕೋಟೆ: ಜಿಲ್ಲೆಯಲ್ಲಿರುವ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಕನಿಷ್ಠ ಶೇ.50 ರಷ್ಟು ಕರ ವಸೂಲಿ ಮಾಡದಿದ್ದಲ್ಲಿ ಬಿಲ್ ಕಲೆಕ್ಟರ್‌ಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು...

ಮಂಗಳೂರು: ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ 3.96 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.

ಜಪ್ಪಿನಮೊಗರು ನಿವಾಸಿ ಮನೀಶ್(20) ಮತ್ತು ಬಿಜೈ ನಿವಾಸಿ ನಿತಿನ್(26) ಬಂಧಿತರು. ಆರೋಪಿಗಳಿಂದ 3.96 ಲಕ್ಷ ರೂ., ಐ-20 ಕಾರು, 3 ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.

ಮೂಲತಃ ತೊಕ್ಕೊಟ್ಟು ನಿವಾಸಿಗಳಾದ ಮೆಲ್ವಿನ್ ವಿಶ್ವಾಸ್ ಮತ್ತು ಡೆನ್ಸಿಲ್ ಈ ಬೆಟ್ಟಿಂಗ್ ಬುಕ್ಕಿಗಳು. ಪ್ರತಿ ಬಾರಿಯೂ ಐಪಿಎಲ್ ಕ್ರಿಕೆಟ್ ಪಂದ್ಯಾಟ ನಡೆಯುವ ಅವಧಿಯಲ್ಲಿ ಅವರು ಗೋವಾಕ್ಕೆ ತೆರಳಿ ಅಲ್ಲಿಂದ ಆನ್‌ಲೈನ್ ಮೂಲಕ ಬುಕ್ಕಿಂಗ್ ವ್ಯವಹಾರ ಕುದುರಿಸುತ್ತಿದ್ದರು. ಹಲವರನ್ನು ತಮ್ಮ ಬಲೆಗೆ ಬೀಳಿಸಿ ಲಕ್ಷಾಂತರ ರೂ. ವ್ಯವಹಾರ ನಡೆಸುತ್ತಿದ್ದರು.

ಹಣ ತಲುಪಿಸುವ ಜವಾಬ್ದಾರಿ ಹೊತ್ತಿದ್ದರು: ಗುರುವಾರ ನಡೆದ ಆರ್‌ಸಿಬಿ ಮತ್ತು ಮುಂಬೈ ನಡುವಿನ ಪಂದ್ಯದಲ್ಲೂ ಬುಕ್ಕಿಗಳ ಮೂಲಕ ರಾಜೇಶ್ ಎಂಬಾತ ಆ್ಯಪ್ ಮೂಲಕ ಬೆಟ್ಟಿಂಗ್ ಹಾಕಿದ್ದ. ಪಂದ್ಯದಲ್ಲಿ ಹಣ ಕಳೆದುಕೊಂಡ ಬಳಿಕ ಬೆಟ್ಟಿಂಗ್ ಹಣವನ್ನು ಮನೀಶ್ ಮುಖಾಂತರ ನಿತಿನ್‌ಗೆ ಕೊಟ್ಟಿದ್ದ. ನಿತಿನ್ ಆ ಹಣವನ್ನು ಬುಕ್ಕಿ ಮೆಲ್ವಿನ್ ವಿಶ್ವಾಸ್‌ಗೆ ತಲುಪಿಸುವ ಜವಾಬ್ದಾರಿ ವಹಿಸಿಕೊಂಡಿದ್ದ. ಈ ಬಗ್ಗೆ ಮಾಹಿತಿ ಪಡೆದ ನಗರ ಅಪರಾಧ ಪತ್ತೆದಳ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್, ಡಿಸಿಪಿಗಳಾದ ಹನುಮಂತರಾಯ, ಉಮಾಪ್ರಶಾಂತ್ ಅವರ ನಿರ್ದೇಶನ ಮೇರೆಗೆ ಕಾರ್ಯಾಚರಣೆಯಲ್ಲಿ ಇನ್‌ಸ್ಪೆಕ್ಟರ್ ಶಿವಪ್ರಕಾಶ್ ನಾಯಕ್, ಎಸ್‌ಐ ಕಬ್ಬಳ್‌ರಾಜ್, ಸಿಬ್ಬಂದಿ ಮಣಿ, ಯೋಗೀಶ್, ರಾಮಣ್ಣ, ರಾಜಾ ಭಾಗವಹಿಸಿದ್ದರು.

ಬೆಟ್ಟಿಂಗ್ ಮೇಲೆ ಹದ್ದಿನ ಕಣ್ಣು: ಐಪಿಎಲ್ ಬೆಟ್ಟಿಂಗ್‌ನಲ್ಲಿ ತೊಡಗಿಕೊಳ್ಳದಂತೆ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಕೆಲದಿನಗಳ ಹಿಂದೆ ಟ್ವಿಟರ್ ಮೂಲಕ ಮುನ್ನೆಚ್ಚರಿಕೆ ಸಂದೇಶ ರವಾನಿಸಿದ್ದರು. ಮಂಗಳವಾರ ಐಪಿಎಲ್ ಬೆಟ್ಟಿಂಗ್‌ನಲ್ಲಿ ತೊಡಗಿಕೊಂಡಿದ್ದ ಮೂವರನ್ನು ಮಂಗಳೂರು ನಗರ ಅಪರಾಧ ಪತ್ತೆದಳ ಪೊಲೀಸರು ಬಿಜೈ ಬಳಿ ಬಂಧಿಸಿ, 62,700 ರೂ. ನಗದು ಹಾಗೂ 4 ಮೊಬೈಲ್ ವಶಪಡಿಸಿಕೊಂಡಿದ್ದರು. ಶುಕ್ರವಾರ ಪಣಂಬೂರು ಮೀನಕಳಿಯ ಸಮುದ್ರ ಕಿನಾರೆಯಲ್ಲಿ ಮೊಬೈಲ್ ಆ್ಯಪ್ ಮೂಲಕ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಇಬ್ಬರನ್ನು ಮಂಗಳೂರು ನಗರ ಉತ್ತರ ಉಪವಿಭಾಗ ರೌಡಿ ನಿಗ್ರಹದಳ ಪೊಲೀಸರು ಬಂಧಿಸಿ 68 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದರು.

ವಿಡಿಯೋ ನ್ಯೂಸ್

VIDEO| ಇಂದಿರಾ ಜೈಸಿಂಗ್​ ಅಂತಹವರನ್ನು ನಿರ್ಭಯಾ ಅಪರಾಧಿಗಳ ಜತೆ ಜೈಲಿನ...

ನವದೆಹಲಿ: ಹಿರಿಯ ವಕೀಲೆ ಇಂದಿರಾ ಜೈಸಿಂಗ್​ ಅವರನ್ನು ನಿರ್ಭಯಾ ಪ್ರಕರಣದ ಅಪರಾಧಿಗಳ ಜತೆ ಜೈಲಿನಲ್ಲಿಡಬೇಕು ಎಂದು ನಟಿ ಕಂಗನಾ ರಣಾವತ್​ ಆಕ್ರೋಷ ವ್ಯಕ್ತಪಡಿಸಿದ್ದಾರೆ. ನಿರ್ಭಯಾ ಪ್ರಕರಣವನ್ನು ಸಂತ್ರಸ್ಥೆ ತಾಯಿ ಆಶಾದೇವಿ ಅವರು ಕ್ಷಮಿಸಬೇಕು ಎಂಬ...

VIDEO| ಪ.ಬಂಗಾಳದಲ್ಲಿ ಮೂರೇ ವರ್ಷ ಹಿಂದೆ 165 ಕೋಟಿ ರೂ....

ಬಂಕುರಾ: ಪಶ್ಚಿಮ ಬಂಗಾಳದ ಬಂಕುರಾದ ಸಾರೆಂಗಾದಲ್ಲಿ ಕೇವಲ ಮೂರೇ ವರ್ಷ ಹಿಂದ 165 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಓವರ್ ಹೆಡ್ ಟ್ಯಾಂಕ್ ಒಂದು ಬುಧವಾರ ಅಪರಾಹ್ನ ಕುಸಿದು ಬಿದ್ದಿದೆ....

VIDEO| ಗಗನಯಾನಕ್ಕೆ ವ್ಯೋಮಮಿತ್ರಾ; ಇಸ್ರೋದಿಂದ ರೋಬಾಟ್ ಅನಾವರಣ, ವರ್ಷಾಂತ್ಯಕ್ಕೆ ಪ್ರಯಾಣ

ಬೆಂಗಳೂರು: ಭಾರತದ ಮಹತ್ವಾಕಾಂಕ್ಷಿ ಬಾಹ್ಯಾಕಾಶ ಕಾರ್ಯಕ್ರಮ ಗಳಲ್ಲೊಂದಾದ ಮಾನವಸಹಿತ ಗಗನಯಾನಕ್ಕೆ ಪೂರ್ವಭಾವಿಯಾಗಿ ಪ್ರಯಾಣ ಬೆಳೆಸಲಿರುವ ರೋಬಾಟ್ ‘ವ್ಯೋಮಮಿತ್ರಾ’ವನ್ನು ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಬುಧವಾರ ಬೆಂಗಳೂರಿನಲ್ಲಿ ಅನಾವರಣಗೊಳಿಸಿದೆ. ಖಾಸಗಿ ಹೋಟೆಲ್​ನಲ್ಲಿ ‘ಮಾನವಸಹಿತ ಗಗನಯಾನ ಮತ್ತು ಅನ್ವೇಷಣೆ ಕಾರ್ಯಕ್ರಮ’...

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...