21.7 C
Bengaluru
Tuesday, January 21, 2020

ಬೈರಾಡಿ ಕೆರೆಗೆ ಮಾತ್ರ ಅಭಿವೃದ್ಧಿ ಭಾಗ್ಯ

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಭರತ್ ಶೆಟ್ಟಿಗಾರ್ ಮಂಗಳೂರು

ಗುಜ್ಜರಕೆರೆ, ಎಮ್ಮೆಕೆರೆ, ಅರೆಕರೆ, ಓಣಿಕೆರೆ, ತಾವರೆ ಕೆರೆ, ಮೊಯ್ಲಿ ಕೆರೆ, ಕಾವೂರು ಕೆರೆ, ಪಡೀಲ್ ಬೈರಾಡಿ ಕೆರೆ…. ಇವೆಲ್ಲ ಒಂದು ಕಾಲದಲ್ಲಿ ಕುಡಿಯುವ ನೀರು ಮತ್ತು ನೀರಿನ ಇತರ ಬೇಡಿಕೆ ಪೂರೈಸಿದ ಮಂಗಳೂರಿನ ಪ್ರಮುಖ ಕೆರೆಗಳು.

ಇಂದು ನಗರ ಬೆಳೆದಂತೆ ಇವುಗಳಲ್ಲಿ ಹೆಚ್ಚಿನ ಕೆರೆಗಳು ಮಾಯವಾಗಿದ್ದು, ಹೆಸರು ಮಾತ್ರ ಇದೆ. ಇನ್ನು ಕೆಲವು ಇದ್ದೂ ನೀರಿನ ಬೇಡಿಕೆ ಪೂರೈಸಲು ಸಂಪೂರ್ಣ ವಿಫಲವಾಗಿದೆ ಎನ್ನಬಹುದು. ನಗರದ ನೀರಿನ ಮೂಲ ಮಾತ್ರವಲ್ಲದೆ ಅಂತರ್ಜಲ ವೃದ್ಧಿಗೂ ಒಂದು ಕಾಲದಲ್ಲಿ ಈ ಕೆರೆಗಳು ಸಹಕಾರಿಯಾಗಿತ್ತು. ಆದರೆ ಇಂದು ಹೂಳು ತೆಗೆಯದೆ, ತ್ಯಾಜ್ಯ ಗುಂಡಿಗಳಾಗಿ ಮಾರ್ಪಾಡಾಗಿದ್ದು, ಅಂತರ್ಜಲ ರಕ್ಷಣೆ ಕೇವಲ ಕನಸಾಗಿ ಉಳಿದಿದೆ.

ಪ್ರಸ್ತುತ ಕೆರೆಗಳ ಪೈಕಿ ಅಭಿವೃದ್ಧಿಯಾಗುತ್ತಿರುವುದು ಪಡೀಲ್‌ನ ಬೈರಾಡಿ ಕೆರೆ ಮಾತ್ರ. ಅಳಪೆ ಗ್ರಾಮದ ಪಡೀಲ್‌ನಲ್ಲಿರುವ ಕೆರೆ 2.32 ಎಕರೆ ವಿಸ್ತೀರ್ಣ ಹೊಂದಿರುವ ಈ ಕೆರೆಯ ಅಭಿವೃದ್ಧಿಗೆಂದು 3.30 ಕೋಟಿ ರೂ. ಮೊತ್ತ ಮೀಸಲಿಡಲಾಗಿದೆ. ಈ ಪೈಕಿ ಸಣ್ಣ ನೀರಾವರಿ ಇಲಾಖೆ 79 ಲಕ್ಷ ರೂ. ಹಾಗೂ ಮುಡಾ ಕೆರೆ ಅಭಿವೃದ್ಧಿ ನಿಧಿಯಿಂದ 2.50 ಕೋಟಿ ರೂ.ಒದಗಿಸಿದೆ. ಕೆರೆಗೆ ಬಾಕಿಯಿದ್ದ ಎರಡು ಕಡೆ ಮೆಟ್ಟಿಲು ನಿರ್ಮಾಣ ಮಾಡಲಾಗುತ್ತಿದ್ದು, ಮುಡಾದಿಂದ ಗಾರ್ಡನ್, ವಾಕಿಂಗ್ ಟ್ರಾೃಕ್ ಕಾಮಗಾರಿ ನಡೆಯಲಿದೆ ಕೆರೆಯ ಹೂಳು ತೆಗೆಯಲಾಗಿದ್ದು, ಮೀನು ಹಿಡಿಯುವ ಸ್ಪರ್ಧೆಯನ್ನೂ ಕೆರೆಯಲ್ಲಿ ಆಯೋಜಿಸಲಾಗಿತ್ತು. ಕೆರೆಯಲ್ಲಿವ ಬಾರಿ ಬೇಸಿಗೆಯಲ್ಲೂ ನೀರು ತುಂಬಿದೆ. ಇದು ಪರಿಸರದ ಬಾವಿಗಳಲ್ಲಿ ಅಂತರ್ಜಲ ಹೆಚ್ಚಲು ಕಾರಣವಾಗಿದೆ.

ಹೂಳು ತುಂಬಿದ ಗುಜ್ಜರ ಕೆರೆ: ಜಪ್ಪುವಿನಲ್ಲಿರುವ ಗುಜ್ಜರ ಕೆರೆ ಅಭಿವೃದ್ಧಿಗೆ 2017ರಲ್ಲಿ 3 ಕೋಟಿ ರೂ. ಬಿಡುಗಡೆಯಾಗಿದ್ದು, ಕೆರೆಯಲ್ಲಿ ಇನ್ನೂ ಹೂಳು ತುಂಬಿದೆ. ಒಂದು ಕಾಲದಲ್ಲಿ ಮಂಗಳಾದೇವಿ ಹಾಗೂ ಬೊಳಾರ ಮಾರಿಯಮ್ಮ ದೇವರ ಜಳಕದ ಕೆರೆಯಾಗಿದ್ದ ಗುಜ್ಜರಕೆರೆಯ ನೀರನ್ನು ಮೀನುಗಾರಿಕಾ ವಿಶ್ವವಿದ್ಯಾಲಯದಲ್ಲಿ ಪರೀಕ್ಷೆಗೊಳಪಡಿಸಿದಾಗ ಅಪಾಯಕಾರಿ ಬ್ಯಾಕ್ಟೀರಿಯಾಗಳು ಪತ್ತೆಯಾಗಿವೆ. ಇದು ಆತಂಕಕಾರಿ ವಿಷಯವಾಗಿದ್ದು, ಪ್ರಸ್ತುತ ಕೆರೆಗೆ ಹರಿಯುವ ಡ್ರೈನೇಜ್ ನೀರು ನಿಂತಿದೆ. ಈ ಪ್ರದೇಶದಲ್ಲಿ ಹಿಂದೆ ಇನ್ನೂ 5 ಕೆರೆಗಳಿತ್ತು. ಇದರಲ್ಲಿ ಹೆಚ್ಚಿನವು ಕಣ್ಮರೆಯಾಗಿದ್ದು, 3.65 ಎಕರೆ ವಿಸ್ತೀರ್ಣದ ಎಮ್ಮೆಕೆರೆಯಲ್ಲಿ ಶೆ.10ರಷ್ಟು ಮಾತ್ರ ಒತ್ತುವರಿಯಾಗದೆ ಬಾಕಿ ಇದೆ.

ಕಾವೂರು ಕೆರೆ ನಿರ್ಲಕ್ಷೃ: ದಾಖಲೆ ಪ್ರಕಾರ 8 ಎಕರೆಯಷ್ಟು ಇರುವ ಕೆರೆ ಇಂದು ಒತ್ತುವರಿಯಿಂದಾಗಿ 5 ಎಕರೆಯಷ್ಟಾಗಿದೆ. ಕೆರೆ ಅಭಿವೃದ್ಧಿ ಮಾಡುವುದಾಗಿ ಪ್ರತಿಬಾರಿಯೂ ಹೇಳಿಕೆ ನೀಡಿರುವುದು ಹೊರತು ಈ ನಿಟ್ಟಿನಲ್ಲಿ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಕೆಲಸಗಳು ನಡೆದಿಲ್ಲ. ಕೆರೆ ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಗೆ ಬರುತ್ತದೆ, ಅಭಿವೃದ್ಧಿಗಾಗಿ 5 ಕೋಟಿ ರೂ. ಮೊತ್ತದ ಯೋಜನೆಯ ನೀಲಿನಕ್ಷೆ ಸಿದ್ಧಪಡಿಲಾಗಿತ್ತು. ಆದರೆ ಇದು ಕಾರ್ಯಗತವಾಗಿಲ್ಲ ಬದಲಿಗೆ ಕೆರೆಯಲ್ಲಿ ಹೂಳುತುಂಬಿದೆ. ಕಾವೂರು ಕೆರೆ ಅಭಿವೃದ್ಧಿ ಸಮಿತಿ ಕಳೆದ ವರ್ಷ ಕೈ ಕೆಲಸದ ಮೂಲಕ ಕೆರೆಯನ್ನು ಸ್ವಚ್ಛಗೊಳಿಸುವ ಕೆಲಸ ನಡೆದಿತ್ತು.

ಬೈರಾಡಿ ಕೆರೆ ಕೊನೆಗೂ ಅಭಿವೃದ್ಧಿಯಾಗುತ್ತಿದೆ. ಸ್ಥಳೀಯರ ಹೋರಾಟಕ್ಕೆ ಯಶಸ್ಸು ಸಿಕ್ಕಿದೆ. ಕೆರೆಯ ಸುತ್ತ ಕಟ್ಟೆ, ವಾಕಿಂಗ್ ಟ್ರಾೃಕ್ ನಿರ್ಮಾಣವಾಗುವ ಮೂಲಕ ಸಾರ್ವಜನಿಕರನ್ನು ಆಕರ್ಷಿಸಲಿದೆ. ನಗರಕ್ಕೆ ಪ್ರವೇಶ ಮಾಡುವಲ್ಲಿ ಕೆರೆ ಇರುವುದರಿಂದ ಪ್ರವಾಸಿ ಸ್ಥಳವಾಗಿ ಮಾರ್ಪಾಡಾಗಲಿದೆ.
|ಡಾ.ಅಣ್ಣಯ್ಯ ಕುಲಾಲ್, ಬೈರಾಡಿ ಕೆರೆ ಸಂರಕ್ಷಣಾ ಸಮಿತಿ ಅಧ್ಯಕ್ಷ

ಮಂಗಳಾದೇವಿ ಹಾಗೂ ಬೊಳಾರ ಮಾರಿಯಮ್ಮ ದೇವರ ಜಳಕದ ಕೆರೆಯಾಗಿದ್ದ ಗುಜ್ಜರಕೆರೆ ಮತ್ತೆ ತನ್ನ ಹಿಂದಿನ ಗತ ವೈಭವ ಪಡೆಯಬೇಕು ಎಂಬುದು ಆಗ್ರಹ. ಅದಕ್ಕಾಗಿ 2001ರಿಂದಲೇ ಹೋರಾಟ ನಡೆಯುತ್ತಿದೆ. ಪ್ರಸ್ತುತ ಕೆರೆಗೆ ಒಳಚರಂಡಿ ನೀರು ಕೆರೆಗೆ ಹರಿದು ಬರುವುದು ನಿಂತಿದೆ. ಕೆರೆ ಅಭಿವೃದ್ಧಿಗೆ 3 ಕೋಟಿ ರೂ. ಬಿಡುಗಡೆಯಾಗಿದ್ದು, ಕೆರೆಯ ಹೂಳು ತೆಗೆಯುವ ಕೆಲಸ ನಡೆಯಬೇಕಿದೆ.
|ನೇಮು ಕೊಟ್ಟಾರಿ ಗುಜ್ಜರಕೆರೆ ತೀರ್ಥ ಸಂರಕ್ಷಣಾ ವೇದಿಕೆ ಪ್ರಧಾನ ಕಾರ್ಯದರ್ಶಿ

ಕಾವೂರು ಕೆರೆ ಅಭಿವೃದ್ಧಿ ಸಮಿತಿಯಿಂದ ಕಳೆದ ವರ್ಷ ಪ್ರತಿ ಭಾನುವಾರ ಕೆರೆ ಸ್ವಚ್ಛ ಕಾರ್ಯಕ್ರಮ ನಡೆಸಲಾಗಿದೆ. ಇನ್ನು ಸಣ್ಣ ನೀರಾವರಿ ಇಲಾಖೆಯಿಂದ ಸರ್ಕಾರ ಮಟ್ಟದಲ್ಲಿ ಕೆಲಸಗಳು ನಡೆಯಬೇಕಾಗಿದ್ದು, ಇದಕ್ಕಾಗಿ ಪ್ರಯತ್ನಗಳು ನಡೆದಿವೆ.
|ಪ್ರಶಾಂತ್ ಪೈ ಕಾವೂರು ಕೆರೆ ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...