More

    ಮಾಹಿತಿ ಸಂಗ್ರಹಿಸಿದ ಎನ್‌ಐಎ, ಉಗ್ರ ಪರ ಗೋಡೆ ಬರಹ ಪ್ರಕರಣ

    ಮಂಗಳೂರು: ನಗರದಲ್ಲಿ ಉಗ್ರ ಸಂಘಟನೆ ಪರ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆ ಕೈಗೆತ್ತಿಕೊಳ್ಳುವ ಸಾಧ್ಯತೆ ಹೆಚ್ಚಾಗಿದ್ದು, ಈ ಸಂಬಂಧ ಪ್ರಾಥಮಿಕ ಮಾಹಿತಿ ಸಂಗ್ರಹಿಸಿದೆ.

    ಬಂಧಿತರ ಪೈಕಿ ಪ್ರಮುಖ ಆರೋಪಿ ತೀರ್ಥಹಳ್ಳಿಯ ಮಹಮ್ಮದ್ ಶಾರೀಕ್‌ಗೆ ಉಗ್ರ ಸಂಘಟನೆಯೊಂದರ ಸಂಪರ್ಕ ಇರುವ ಸಾಧ್ಯತೆ ಹಿನ್ನೆಲೆಯಲ್ಲಿ ಹಾಗೂ ಈ ಪ್ರಕರಣದಲ್ಲಿ ವಿದೇಶದಲ್ಲಿರುವ ವ್ಯಕ್ತಿ ಕೂಡ ಭಾಗಿಯಾಗಿದ್ದಾನೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಎನ್‌ಐಎ ಈಗಾಗಲೇ ಕೇಂದ್ರ ಗುಪ್ತಚರ ದಳದಿಂದ ಮಾಹಿತಿ ಪಡೆದುಕೊಂಡಿದೆ. ಪ್ರಕರಣ ಗಂಭೀರವಾಗಿರುವುದನ್ನು ಅರಿತು ಇದೀಗ ಸ್ವತಃ ಎನ್‌ಐಎ ತಂಡ ನಗರಕ್ಕೆ ಆಗಮಿಸಿ ಮಾಹಿತಿ ಕಲೆ ಹಾಕಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಪೊಲೀಸ್ ಹಿರಿಯ ಅಧಿಕಾರಿಗಳು ಎನ್‌ಐಎ ತಂಡ ನಗರಕ್ಕೆ ಆಗಮಿಸಿರುವುದನ್ನು ದೃಢಪಡಿಸಿಲ್ಲ.

    ಗೋಡೆ ಬರಹ ದುಷ್ಕೃತ್ಯಕ್ಕೆ ಬಳಸಿದ ಪರಿಕರಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದು, ಅವುಗಳು ಕೂಡ ಪ್ರಕರಣಕ್ಕೆ ಮಹತ್ವದ ಸಾಕ್ಷೃಗಳಾಗಿವೆ ಎಂದು ತಿಳಿದು ಬಂದಿದೆ. ತೀರ್ಥಹಳ್ಳಿಯಲ್ಲಿ ತನ್ನ ತಂದೆಯ ಹೋಲ್‌ಸೇಲ್ ಬಟ್ಟೆ ಅಂಗಡಿಯಲ್ಲಿ ಸೇಲ್ಸ್‌ಮನ್ ಆಗಿದ್ದ ಮಹಮ್ಮದ್ ಶಾರೀಕ್ ಆಗಾಗ ಮಂಗಳೂರಿಗೆ ಬರುತ್ತಿದ್ದ.

    ಮಂಗಳೂರಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸವಾಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಝ್ ಮುನೀರ್ ಅಹಮ್ಮದ್‌ನನ್ನು ಕೂಡ ತನ್ನ ದುಷ್ಕೃತ್ಯಕ್ಕೆ ಸೇರಿಸಿಕೊಂಡಿದ್ದ. ಕೃತ್ಯ ನಡೆಸಿದ ಬಳಿಕ ಶಾರೀಕ್‌ನ ಚಿಕ್ಕಪ್ಪ ಸಾದತ್ ಹಣಕಾಸಿನ ನೆರವು ಹಾಗು ತಪ್ಪಿಸಿಕೊಳ್ಳಲು ಸಹಕಾರ ನೀಡಿದ್ದ. ಪ್ರಕರಣದ ಬೇರುಗಳು ಹಲವು ಕಡೆಗಳಿಗೆ ಚಾಚಿಕೊಂಡಿದ್ದು, ಪೊಲೀಸರು ತನಿಖೆ ನಡೆಸಿ ಅವುಗಳನ್ನು ಪತ್ತೆ ಮಾಡುವತ್ತ ಶ್ರಮಿಸುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts