ಷೇರು ಮಾರುಕಟ್ಟೆ ಹೂಡಿಕೆ ಹೆಸರಲ್ಲಿ 34.80 ಲಕ್ಷ ರೂ. ವಂಚನೆ

Fruad
Published on

ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಿನಲ್ಲಿ ವ್ಯಕ್ತಿಯೋರ್ವರಿಂದ 34.80 ಲ.ರೂ. ಪಡೆದು ವಂಚಿಸಿದ ಘಟನೆ ನಡೆದಿದೆ.


ದೂರುದಾರರು ಜು.1ರಂದು ಇನ್‌ಸ್ಟಾಗ್ರಾಂನಲ್ಲಿ ಷೇರು ವ್ಯಾಪಾರ ಕಂಪೆನಿಯ ಬಗ್ಗೆ ಇದ್ದ ಲಿಂಕ್‌ನ್ನು ನೋಡಿ ಅದರ ಮೂಲಕ ಅಪ್ಲಿಕೇಷನ್ ಡೌನ್‌ಲೋಡ್ ಮಾಡಿಕೊಂಡಿದ್ದರು. ಅನಂತರ ಅದರಲ್ಲಿ ಕಸ್ಟಮರ್ ಸರ್ವೀಸ್‌ನ ಚಾಟ್ ಬಾಕ್ಸ್‌ನಲ್ಲಿ ಅಪರಿಚಿತ ವ್ಯಕ್ತಿಗಳು ಷೇರು ಮಾರುಕಟ್ಟೆಯ ಬಗ್ಗೆ ತಿಳಿಸಿ ಹಣ ಹೂಡಿಕೆ ಮಾಡಿ ಹೆಚ್ಚಿನ ಹಣ ಗಳಿಸಬಹುದೆಂದು ಪ್ರೆರೇಪಿಸಿದ್ದರು. ಅದನ್ನು ನಂಬಿದ ದೂರುದಾರರು ಜು.1ರಿಂದ ಆ.12ರವರೆಗೆ ಹಂತ ಹಂತವಾಗಿ ಅಪರಿಚಿತ ವ್ಯಕ್ತಿಯು ನೀಡಿದ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ಒಟ್ಟು 34,80,000 ರೂ.ಗಳನ್ನು ವರ್ಗಾಯಿಸಿದ್ದಾರೆ.

ಕೆಲವು ದಿನಗಳ ಅನಂತರ ಹೂಡಿಕೆ ಮಾಡಿದ ಹಣವನ್ನು ಹಿಂಪಡೆಯಲು ಮುಂದಾದಾಗ ಅಪರಿಚಿತ ವ್ಯಕ್ತಿಗಳು ಶೇ.20 ರಷ್ಟು ತೆರಿಗೆ ಪಾವತಿಸುವಂತೆ ತಿಳಿಸಿದರು. ದೂರುದಾರರು ಹಣವನ್ನು ವಾಪಸ್ ಪಡೆಯಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಆಗ ದೂರುದಾರರಿಗೆ ತಾನು ಮೋಸ ಹೋಗಿರುವುದು ಗೊತ್ತಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net