More

    2ನೇ ಬಾರಿಗೆ ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್​ ಸಹಾ ಪ್ರಮಾಣ ವಚನ ಸ್ವೀಕಾರ

    ಅಗರ್ತಲ: ಫೆ. 16ರಂದು ನಡೆದ ತ್ರಿಪುರಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದ ಬಳಿಕ ಮಾಣಿಕ್​ ಸಹಾ ಎರಡನೇ ಅವಧಿಗೆ ತ್ರಿಪುರಾ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಅಲ್ಲದೆ, ಇತರೆ 8 ಸಚಿವರು ಕೂಡ ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಿದರು.

    ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಶಾ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರು ಅಗರ್ತಲದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಭಾಗಿಯಾದರು. ಇವರ ಜೊತೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಮತ್ತು ಬಿಜೆಪಿಯ ಈಶಾನ್ಯ ರಾಜ್ಯ ಚುನಾವಣಾ ಯಶಸ್ಸಿನ ರೂವಾರಿ ಹಿಮಂತ ಬಿಸ್ವಾ ಶರ್ಮಾ ಕೂಡ ಇದ್ದರು.

    ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೆಮಾ ಖಂಡ, ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಮತ್ತು ಸಿಕ್ಕಿಂ ಮುಖ್ಯಮಂತ್ರಿ ಪಿ.ಎಸ್. ತಮಾಂಗ್ ಕೂಡ ಉಪಸ್ಥಿತರಿದ್ದರು.

    ಇದನ್ನೂ ಓದಿ: ಪ್ರಿಯಾಂಕಾ ಗಾಂಧಿ ಆಪ್ತ ಸಹಾಯಕನ ವಿರುದ್ಧ ಗಂಭೀರ ಆರೋಪ ಮಾಡಿದ ಮಿಸ್​ ಬಿಕಿನಿ ಗರ್ಲ್!

    ಹಿಂದಿನ ಸರ್ಕಾರದಲ್ಲಿ ಸಚಿವರಾಗಿದ್ದ ರತನ್ ಲಾಲ್ ನಾಥ್, ಪ್ರಣಜಿತ್ ಸಿಂಗ್ ರಾಯ್, ಶಾಂತಾ ಚಕ್ಮಾ ಮತ್ತು ಸುಶಾಂತ ಚೌಧರಿ ಅವರು ಮತ್ತೆ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಮೂರು ಹೊಸ ಮಂತ್ರಿಗಳನ್ನು ತಮ್ಮ ಸಂಪುಟಕ್ಕೆ ಮಾಣಿಕ್​ ಸಹಾ ಸೇರಿಸಿಕೊಂಡಿದ್ದ, ಬಿಪ್ಲಬ್ ದೇಬ್ ಅವರ ನಿಕಟವರ್ತಿ ಟಿಂಕು ರಾಯ್, ಬಿಜೆಪಿಯ ಪರಿಶಿಷ್ಟ ಪಂಗಡಗಳ ಮೋರ್ಚಾದ ಮುಖ್ಯಸ್ಥ ಬಿಕಾಶ್ ದೆಬ್ಬರ್ಮಾ ಮತ್ತು ಸುಧಾಂಶು ದಾಸ್ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

    ಬಿಜೆಪಿಯ ಮಿತ್ರಪಕ್ಷವಾದ ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರಾ (ಐಪಿಎಫ್‌ಟಿ) ಈ ಚುನಾವಣೆಯಲ್ಲಿ ಸೋತಿದ್ದರೂ ಒಂದು ಸಚಿವ ಸ್ಥಾನವನ್ನು ಪಡೆದುಕೊಂಡಿದೆ. ಸುಕ್ಲಾ ಚರಣ್ ನೋಟಿಯಾ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

    ರಾಜ್ಯದಲ್ಲಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಪ್ರತಿಭಟಿಸಲು ಪ್ರತಿಪಕ್ಷ ಸಿಪಿಎಂ ಮತ್ತು ಕಾಂಗ್ರೆಸ್ ಪ್ರಮಾಣ ವಚನ ಸಮಾರಂಭವನ್ನು ಬಹಿಷ್ಕರಿಸಿದವು.

    ನಾಗಾಲ್ಯಾಂಡ್‌ಗೆ ನೇಫಿಯು ರಿಯೊ, ಮೇಘಾಲಯಕ್ಕೆ ಕಾನ್ರಾಡ್​ ಸಂಗ್ಮಾ
    ನವದೆಹಲಿ: ನ್ಯಾಷನಲಿಸ್ಟ್ ಡೆಮಾಕ್ರಟಿಕ್‌ ಪೊಗ್ರೆಸಿವ್ ಪಾರ್ಟಿಯ ನೇಫಿಯು ರಿಯೊ ಮತ್ತು ನ್ಯಾಷನಲ್ ಪೀಪಲ್ ಪಾರ್ಟಿ ಮುಖ್ಯಸ್ಥ ಕಾನ್ರಾಡ್​ ಸಂಗ್ಮಾ ಕ್ರಮವಾಗಿ ನಾಗಾಲ್ಯಾಂಡ್ ಮತ್ತು ಮೇಘಾಲಯದ ಮುಖ್ಯಮಂತ್ರಿಯಾಗಿ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು. ಎರಡೂ ಸಮಾರಂಭಗಳಲ್ಲಿ ಪ್ರಧಾನಿ ನರೇಂದ್ರಮೋದಿ ಉಪಸ್ಥಿತರಿದ್ದು, ಪ್ರಮಾಣ ವಚನ ಸ್ವೀಕರಿಸಿದ ಎಲ್ಲರಿಗೂ ಶುಭ ಕೋರಿದರು.

    ನಾಗಾಲ್ಯಾಂಡ್ ರಾಜಧಾನಿ ಕೊಹಿಮಾದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಗಣೇಶನ್ ಅವರು ನೇಫಿಯು ರಿಯೊ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಇವರ ಜತೆಗೆ 9 ಶಾಸಕರು ಸಚಿವರಾಗಿ ಹಾಗೂ ಇಬ್ಬರು ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಷಾ ಮತ್ತು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಭಾಗವಹಿಸಿದ್ದರು. ನಾಗಾಲ್ಯಾಂಡ್‌ನಲ್ಲಿ ನಡೆದ ಚುನಾವಣೆಯಲ್ಲಿ ಎನ್‌ಡಿಪಿಪಿ-ಬಿಜೆಪಿ ಮೈತ್ರಿಕೂಟ, 60 ಸದಸ್ಯ ಬಲದ ವಿಧಾನಸಭೆಯಲ್ಲಿ 37 ಸ್ಥಾನಗಳನ್ನು ಗೆದ್ದುಕೊಂಡಿತ್ತು.ರಾಜ್ಯದ ಇತರ ಎಲ್ಲ ಪಕ್ಷಗಳು ರಿಯೊ ನೇತೃತ್ವದ ಮೈತ್ರಿಕೂಟಕ್ಕೆ ಬೆಂಬಲ ಸೂಚಿಸಿವೆ. ಮೇಘಾಲಯದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಫಾಗು ಚೌಹಾಣ್ ಅವರು ಕಾಲ್ತಾಡ್ ಸಂಗ್ಯಾ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಇವರ ಜತೆಗೆ 12 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

    ಇದನ್ನೂ ಓದಿ: ಕಾರು ತಡೆದ ಟ್ರಾಫಿಕ್​ ಪೊಲೀಸ್​: ನಡುರಸ್ತೆಯಲ್ಲೇ ಯುವತಿಯಿಂದ ಭಾರೀ ಹೈಡ್ರಾಮ, ವಿಡಿಯೋ ವೈರಲ್​

    ಎನ್‌ ಪಿಪಿ ನೇತೃತ್ವದ ಮೈತ್ರಿಕೂಟವು ಬಿಜೆಪಿಯ ಇಬ್ಬರು ಸೇರಿದಂತೆ 45 ಶಾಸಕರ ಬೆಂಬಲದೊಂದಿಗೆ ಸರ್ಕಾರ ರಚಿಸಲು ಹಕ್ಕು ಮಂಡಿಸಿತ್ತು. ಎನ್‌ಪಿಪಿ 26, ಯುಡಿಪಿ11, ಕಾಂಗ್ರೆಸ್ 5, ಟಿಎಂಸಿ5, ಬಿಜೆಪಿ, ಎಚ್‌ಎಸ್‌ಪಿಡಿಪಿ, ಪಿಡಿಎಫ್‌ನ ತಲಾ ಇಬ್ಬರು, ಇಬ್ಬರು ಪಕ್ಷೇತರರು ಗೆಲುವು ಸಾಧಿಸಿದ್ದಾರೆ. ಲೋಕಪ್ರಿಯಾ ಗೋಪಿನಾಥ್ ಬೊರ್ಡೋ ಲೋಮ್ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ ಆಗಮಿಸಿದ ಮೋದಿ ಅವರನ್ನು ಅಸ್ಸಾಂ ಗವರ್ನರ್ ಗುಲಾಬ್ ಚಂದ್ ಕಟಾರಿಯಾ ಬರಮಾಡಿಕೊಂಡರು. ನಂತರ ಹೆಲಿಕಾಪ್ಟರ್‌ನಲ್ಲಿ ಶಿಲ್ಲಾಂಗ್‌ಗೆ ತೆರಳಿದ ಮೋದಿ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಬರಮಾಡಿಕೊಂಡರು. ಆ ಸಂದರ್ಭದಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಕೂಡ ಉಪಸ್ಥಿತರಿದ್ದರು. ಮೇಘಾಲಯದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ ಎಲ್ಲ ನಾಯಕರು ಅಲ್ಲಿಂದ ನಾಗಾಲ್ಯಾಂಡ್‌ನ ಕೊಹಿಮಾದಲ್ಲಿ ನಡೆದ ಸಮಾರಂಭದಲ್ಲಿ ಪಾಲ್ಗೊಂಡರು. (ಏಜೆನ್ಸೀಸ್​)

    ಪತಿ ದುಬೈನಲ್ಲಿದ್ದಾನೆ ಮನೆಗೆ ಬಾ… ಮಹಿಳೆಯ ಮಾತು ನಂಬಿ ಹೋದ ಯುವಕನಿಗೆ ಕಾದಿತ್ತು ಬಿಗ್​ ಶಾಕ್​

    ನಿಮ್ಮ ಕಣ್ಣಿಗೊಂದು ಸವಾಲು: ಸಾಧ್ಯವಾದ್ರೆ ಈ ಫೋಟೋದಲ್ಲಿರೋ ನೀರಿನ ಬಾಟಲ್​ ಗುರುತಿಸಿ

    ಎಲ್ಲೆಂದರಲ್ಲಿ ಸಿಗರೇಟ್ ತುಂಡು ಬಿಸಾಡಿದರೆ ಬೀಳಲಿದೆ ದಂಡ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts