ಟೇಬಲ್ ಟೆನ್ನಿಸ್‌ನಲ್ಲಿ ಮಣಿಪಾಲ ಜ್ಞಾನಸುಧಾ ಚಾಂಪಿಯನ್

blm (8)
Published on

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಸಹಯೋಗದೊಂದಿಗೆ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ-ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ವಿದ್ಯಾರ್ಥಿನಿಯರಾದ ನಮ್ರತಾ ಎನ್.ಆರ್., ಧೃತಿ ಕೆ.ಶೆಟ್ಟಿ, ಆಧ್ಯಾ ಲೋಕೇಶ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿನಿಯರನ್ನು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ಮತ್ತು ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್‌ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ, ಕಾಲೇಜು ಪ್ರಾಂಶುಪಾಲರು ಹಾಗೂ ಬೋಧಕ ಬೋಧಕೇತರ ವರ್ಗ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net