ಜ್ಞಾನಸುಧಾ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ

chirag
ಚಿರಾಗ್ ಸಿ.ಪೂಜಾರಿ
Published on

ಕಾರ್ಕಳ: ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ಸ್ ಅಸೋಸಿಯೇಶನ್ ವತಿಯಿಂದ ಇತ್ತಿಚೆಗೆ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆದ ಅಥ್ಲೆಟಿಕ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ 18ರ ವಯೋಮಾನ ಬಾಲಕರ ವಿಭಾಗದ 100 ಮೀಟರ್ ಮತ್ತು 200 ಮೀಟರ್ ಓಟದ ಸ್ಪರ್ಧೆಯಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚಿರಾಗ್ ಸಿ.ಪೂಜಾರಿ ರಾಜ್ಯಮಟ್ಟದ ಅಮೆಚೂರ್ ಜೂನಿಯರ್ ಅಥ್ಲೆಟಿಕ್ಸ್ ಕೂಟಕ್ಕೆ ಆಯ್ಕೆಯಾಗಿದ್ದಾರೆ.ಅವರು ಹೆಬ್ರಿ ಸಂತೆಕಟ್ಟೆಯ ಚಂದ್ರ ಪೂಜಾರಿ ಹಾಗೂ ಜಯಲಕ್ಷ್ಮಿ ದಂಪತಿ ಪುತ್ರ. ಸಾಧಕ ವಿದ್ಯಾರ್ಥಿಯನ್ನು ಅಜೆಕಾರು ಪದ್ಮ ಗೋಪಾಲ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net