More

    ಮಣಿಪುರ ವೈರಲ್ ವಿಡಿಯೋ ಪ್ರಕರಣ: 14 ಜನರನ್ನು ಗುರುತಿಸಿದ ಪೊಲೀಸರು

    ಇಂಫಾಲ್: ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಪರೇಡ್ ನಡೆಸಿದ ವಿಡಿಯೋದಲ್ಲಿ 14 ಜನರನ್ನು ಗುರುತಿಸಲಾಗಿದ್ದು, ಅವರನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಮೇ 4 ರಂದು ನಡೆದ ಘಟನೆಯ ವೈರಲ್ ವೀಡಿಯೊಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಆರು ಜನರನ್ನು ಬಂಧಿಸಿದ್ದಾರೆ.

    26 ಸೆಕೆಂಡುಗಳ ಈ ಘಟನೆಯ ವಿಡಿಯೋ ಜುಲೈ 19 ರಂದು ಹೊರಬಂದಿತು. ವಿಡಿಯೋದಲ್ಲಿ ಕಂಡುಬರುವ ಮಹಿಳೆಯರಲ್ಲಿ ಒಬ್ಬರು ಮಾಜಿ ಸೈನಿಕನ ಪತ್ನಿಯಾಗಿದ್ದು, ಅವರು ಅಸ್ಸಾಂ ರೆಜಿಮೆಂಟ್‌ನಲ್ಲಿ ಸುಬೇದಾರ್ ಆಗಿ ಸೇವೆ ಸಲ್ಲಿಸಿದ್ದಾರೆ ಮತ್ತು ಕಾರ್ಗಿಲ್ ಯುದ್ಧದಲ್ಲಿ ಸಹ ಹೋರಾಡಿದ್ದಾರೆ.

    ವಿಡಿಯೋಗೆ ಸಂಬಂಧಿಸಿದಂತೆ ಸುಮಾರು ಒಂದು ತಿಂಗಳ ಹಿಂದೆ ಅಂದರೆ ಜೂನ್ 21 ರಂದು ಕಾಂಗ್ಪೋಕ್ಪಿ ಜಿಲ್ಲೆಯ ಸೈಕುಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

    ಮೇ 3 ರಂದು ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಪ್ರಾರಂಭವಾದಾಗಿನಿಂದ 160 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ. ಒಂದೂವರೆ ತಿಂಗಳಿನಿಂದ ನಡೆದಿರುವ ಮೈತೈ ಮತ್ತು ಕುಕಿ ಸಮುದಾಯಗಳ ನಡುವಿನ ಸಂಘರ್ಷ ರಾಜಕೀಯ ಸ್ವರೂಪ ಪಡೆದಿದೆ. ಮಣಿಪುರದ ಜನಸಂಖ್ಯೆಯ ಸುಮಾರು 53 ಪ್ರತಿಶತದಷ್ಟಿರುವ ಮೈತೈಗಳು ಇಂಫಾಲ್ ಕಣಿವೆಯಲ್ಲಿ ವಾಸಿಸುತ್ತಿದ್ದಾರೆ. ಆದರೆ ನಾಗಾಗಳು ಮತ್ತು ಕುಕಿಗಳನ್ನು ಒಳಗೊಂಡಿರುವ ಬುಡಕಟ್ಟು ಜನಾಂಗದವರು ಶೇಕಡ 40 ರಷ್ಟಿದ್ದು, ಹೆಚ್ಚಾಗಿ ಗುಡ್ಡಗಾಡು ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ.

    ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿವೇತನ: ಅರ್ಜಿ ಸಲ್ಲಿಕೆಗೆ ಜುಲೈ 31 ಕೊನೆ ದಿನ

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts