More

    ಮಣಿಪುರ ಸರ್ಕಾರ ವಜಾಗೊಳಿಸಿ

    ರಾಯಚೂರು: ಮಣಿಪುರದಲ್ಲಿ ಬುಡಕಟ್ಟು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ನಡೆಸಿರುವ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ವಿವಿಧ ಸಂಘಟನೆಗಳಿಂದ ಸೋಮವಾರ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಲಾಯಿತು.

    ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವಲ್ಲಿ ವಿಫಲವಾಗಿರುವ ಮಣಿಪುರ ಸರ್ಕಾರವನ್ನು ವಜಾಗೊಳಿಸಬೇಕು. ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.
    ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ನಿತ್ಯ ಮಹಿಳೆಯರ ಮೇಲೆ ದೌರ್ಜನ್ಯ, ಹಲ್ಲೆ, ಅತ್ಯಾಚಾರ ನಡೆಯುತ್ತಿವೆ. ಧರ್ಮಸ್ಥಳ ಮತ್ತು ಜಿಲ್ಲೆಯ ಗಿಲ್ಲೆಸುಗೂರು ಕ್ಯಾಂಪ್‌ನಲ್ಲಿ ಬಾಲಕಿಯರ ಅನುಮಾನಾಸ್ಪದ ಸಾವಿನ ಕುರಿತು ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು. ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ನಡೆಯದಂತೆ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು ಎಂದು ಸಂಘಟನೆಗಳು ಆಗ್ರಹಿಸಿದವು.
    ದಲಿತ ವಿದ್ಯಾರ್ಥಿ ಪರಿಷತ್ ನಡೆಸಿದ ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕ ಮೌನೇಶ ಜಾಲವಾಡಗಿ, ಪದಾಧಿಕಾರಿಗಳಾದ ಮೌನೇಶ ತುಗ್ಗಲದಿನ್ನಿ, ಎಂ.ಈರಣ್ಣ, ಅಹಿಂದ ಕಲಾವಿದರ ಒಕ್ಕೂಟದ ಪ್ರತಿಭಟನೆಯಲ್ಲಿ ಒಕ್ಕೂಟದ ಅಧ್ಯಕ್ಷ ಅಲ್ತಾಫ್ ರಂಗಮಿತ್ರ, ಪದಾಧಿಕಾರಿಗಳಾದ ಅಶೋಕಕುಮಾರ ಜೈನ್, ರಮೇಶ ಜಾಲಿಬೆಂಚಿ, ಚಂದ್ರಕಾಂತ, ಈರಣ್ಣ, ಬಸವರಾಜ ಮಿಮಿಕ್ರಿ, ನಿಂಗಪ್ಪ, ಆಂಜನೇಯ ಇದ್ದರು.
    ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ನಡೆಸಲಾದ ಪ್ರತಿಭಟನೆಯಲ್ಲಿ ಸಮಿತಿ ಜಿಲ್ಲಾ ಸಂಚಾಲಕ ಎಸ್.ನರಸಿಂಹಲು, ಪದಾಧಿಕಾರಿಗಳಾದ ಹನುಮೇಶ ಅರೋಲಿ, ನಾಗೇಂದ್ರ, ಜಂಬಯ್ಯ, ಫಕೃದ್ದೀನ್ ಅಹ್ಮದ್, ತಿಮ್ಮಪ್ಪ, ಜಲಾಲ್, ಭಾರತೀಯ ಸೇವಾ ಸಮಿತಿ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಬಿ.ತಿಮ್ಮಪ್ಪ, ಪದಾಧಿಕಾರಿಗಳಾದ ಸುದರ್ಶನ, ಆನಂದಕುಮಾರ, ಸಿ.ಮುರಳಿಕೃಷ್ಣ, ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ಪ್ರತಿಭಟನೆಯಲ್ಲಿ ಅಧ್ಯಕ್ಷ ಜನಾರ್ದನ ಹಳ್ಳಿಬೆಂಚಿ, ಪದಾಧಿಕಾರಿಗಳಾದ ವೀರೇಶ ತುಪ್ಪದೋಳ್, ಬಸವರಾಜ ಹೊಸೂರು, ನೂರ್ ಜಹಾನ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts