ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: ಪ್ರಮುಖ ಆರೋಪಿಯ ಬಂಧನ

arest
ಸಾಂದರ್ಭಿಕ ಚಿತ್ರ
Published on

ಇಂಫಾಲ್​: ಇಬ್ಬರು ಮಹಿಳೆಯರನ್ನು ರಸ್ತೆಯಲ್ಲಿ ಬೆತ್ತಲೆಯಾಗಿ ಮೆರವಣಿಗೆ ಮಾಡಿರುವ ಆಘಾತಕಾರಿ ವಿಡಿಯೋಗೆ ಭಾರೀ ಖಂಡನೆ ವ್ಯಕ್ತವಾದ ಬೆನ್ನಲ್ಲೇ, ಪ್ರಕರಣ ಸಂಬಂಧ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಜಸ್ಟ್​​​ ಬಚಾವ್​​: ತನ್ನ ಪ್ರಾಣವನ್ನು ಲೆಕ್ಕಿಸದೇ ಮಗುವಿನ ಜೀವವನ್ನು ಉಳಿಸಿದ ತಾಯಿ

ಹಿಂಸಾಚಾರ ಪೀಡಿತ ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಇಬ್ಬರು ಕುಕಿ-ಜೋ ಬುಡಕಟ್ಟು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುವುದನ್ನು ತೋರಿಸುವ ಭೀಕರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಈ ಕುರಿತು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ವಿಡಿಯೋದಲ್ಲಿ ಕಂಡು ಬಂದ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಿಎಂ, ತಾವು ವೀಡಿಯೊವನ್ನು ನೋಡಿದ್ದು ಇದು ಮಾನವೀಯತೆಯ ವಿರುದ್ಧದ ಅಪರಾಧವಾಗಿದೆ. ಇಂದು ಬೆಳಿಗ್ಗೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಗೆ ಮರಣದಂಡನೆ ಶಿಕ್ಷೆಯನ್ನು ನೀಡುವಂತೆ ರಾಜ್ಯ ಸರ್ಕಾರ ಪ್ರಯತ್ನಿಸುತ್ತದೆ ಎಂದು ಹೇಳಿದ್ದಾರೆ.

ಪ್ರಸ್ತುತ ಸಂಪೂರ್ಣ ತನಿಖೆ ನಡೆಯುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ಎಲ್ಲಾ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿರುವ ಮುಖ್ಯಮಂತ್ರಿಗಳು, ನಮ್ಮ ಸಮಾಜದಲ್ಲಿ ಇಂತಹ ಹೇಯ ಕೃತ್ಯಗಳಿಗೆ ಯಾವುದೇ ಸ್ಥಾನವಿಲ್ಲ ಎಂದು ಹೇಳಿದ್ದಾರೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net