

ನೆಲ್ಯಾಡಿ: ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ನೆಲ್ಯಾಡಿ ಶ್ರೀರಾಮ ವಿದ್ಯಾಲಯ ವಿದ್ಯಾರ್ಥಿ ಮನೀಶ್ ಬಿ.ಶೆಟ್ಟಿ ಉದ್ದ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ಕೋಲಾರದಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ. ತ್ರಿವಿಧ ಜಿಗಿತದಲ್ಲಿ ತೃತೀಯ ಸ್ಥಾನವನ್ನು ಗಳಿಸಿದ್ದಾರೆ.