More

  ಎಎಪಿ: ಮನೀಶ್ ಸಿಸೋಡಿಯಾಗೆ 3 ದಿನಗಳ ಮಧ್ಯಂತರ ಜಾಮೀನು!

  ನವದೆಹಲಿ: ದೆಹಲಿಯ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿರುವ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ತಮ್ಮ ಸೊಸೆಯ ಮದುವೆಯಲ್ಲಿ ಪಾಲ್ಗೊಳ್ಳಲು ದೆಹಲಿ ನ್ಯಾಯಾಲಯ ಸೋಮವಾರ ಮೂರು ದಿನಗಳ ಮಧ್ಯಂತರ ಜಾಮೀನು ನೀಡಿದೆ.

  ಇದನ್ನೂ ಓದಿ:ಮಾರಿಷಸ್‌, ಶ್ರೀಲಂಕಾನಲ್ಲಿಯೂ UPI ಸೇವೆ: ಪ್ರಧಾನಿ ಮೋದಿ ಚಾಲನೆ

  ಸಿಬಿಐ ಮತ್ತು ಇಡಿ ತನಿಖೆ ನಡೆಸುತ್ತಿರುವ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಫೆಬ್ರವರಿ 13 ರಿಂದ 15 ರವರೆಗೆ ವಿಶೇಷ ನ್ಯಾಯಾಧೀಶ ಎಂ ಕೆ ನಾಗ್ಪಾಲ್ ಅವರು ಸಿಸೋಡಿಯಾಗೆ ಜಾಮೀನು ಮಂಜೂರು ಮಾಡಿದ್ದಾರೆ.

  ಈಗ ರದ್ದಾದ ದೆಹಲಿ ಅಬಕಾರಿ ನೀತಿ 2021-22 ರ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರದ ಆರೋಪದ ಮೇಲೆ ಸಿಬಿಐ ಫೆಬ್ರವರಿ 26, 2023 ರಂದು ಮಾಜಿ ಉಪಮುಖ್ಯಮಂತ್ರಿಯನ್ನು ಬಂಧಿಸಿತ್ತು. ಸಿಬಿಐ ಅವರನ್ನು ಬಂಧಿಸಿದ ನಂತರ, ಜಾರಿ ನಿರ್ದೇಶನಾಲಯ (ಇಡಿ) ಮಾರ್ಚ್ 9 ರಂದು ಸಂಬಂಧಿತ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಿಂದ ಅವರನ್ನು ಬಂಧಿಸಿತ್ತು.

  ಫೆಬ್ರವರಿ 2023 ರಲ್ಲಿ, ದೆಹಲಿಯ ಹೊಸ ಅಬಕಾರಿ ನೀತಿ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದೆ. ಅಬಕಾರಿ ನೀತಿಯಲ್ಲಿ ಅಕ್ರಮ ನಡೆದಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ ನಂತರ ಈ ನೀತಿಯನ್ನು ಹಿಂಪಡೆಯಲಾಗಿದೆ.

  ಸಿಬಿಐ ಅವರನ್ನು ಬಂಧಿಸಿದ ನಂತರ, ಜಾರಿ ನಿರ್ದೇಶನಾಲಯ (ಇಡಿ) ಅವರನ್ನು ಮಾರ್ಚ್ 9 ರಂದು ತಿಹಾರ್ ಜೈಲಿನಿಂದ ಸಂಬಂಧಿತ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿನ ಮಾಡಿತ್ತು.

  ಆಪ್ತ ಸಹಾಯಕನ ಮನೆಗೆ ಯಶ್ ಭೇಟಿ; ಮಗುವನ್ನು ಮುದ್ದಾಡಿ ಚಿನ್ನದ ಸರ ಗಿಫ್ಟ್ ಕೊಟ್ಟ ರಾಕಿ ಭಾಯ್!

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts