More

    ಅಬಕಾರಿ ನೀತಿ ಪ್ರಕರಣ; CBI ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಸಿಸೋಡಿಯಾ

    ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪಮುಖ್ಯಮಂತ್ರಿ, ಎಎಪಿ ನಾಯಕ ಮನೀಶ್‌ ಸಿಸೋಡಿಯಾ ಬಂಧಿಸಲಾಗಿದೆ. ಕೋರ್ಟ್‌ ಸೋಮವಾರ ಅವರನ್ನು ಮಾರ್ಚ್ 4ರ ತನಕ ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.

    ಮನೀಶ್‌ ಸಿಸೋಡಿಯಾ ಪರ ವಕೀಲರು ಮಂಗಳವಾರ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದಾರೆ. ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ತಮ್ಮನ್ನು ಬಂಧಿಸಿದ ಕ್ರಮವನ್ನು ಪ್ರಶ್ನೆ ಮಾಡಿದ್ದಾರೆ. ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ಪೀಠದ ಮುಂದೆ ಈ ಅರ್ಜಿಯ ತುರ್ತು ವಿಚಾರಣೆಗೆ ಮನವಿ ಮಾಡುವ ಸಾಧ್ಯತೆ ಇದೆ.

    ಇದನ್ನೂ ಓದಿ: 93 ಲಕ್ಷ ರೂ. ಖರ್ಚು ಮಾಡಿ ಬರ್ತಡೆ ಸೆಲೆಬ್ರೆಟ್​ ಮಾಡಿಕೊಂಡ ಊರ್ವಶಿ ರೌಟೇಲಾ!

    ಮನೀಶ್‌ ಸಿಸೋಡಿಯಾ, ತಮ್ಮನ್ನು ಬಂಧಿಸಿದ ಸಿಬಿಐ ಕ್ರಮವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ಇಂದೇ ವಿಚಾರಣೆ ನಡೆಸಲು ಕೋರ್ಟ್‌ ಒಪ್ಪಿಗೆ ನೀಡಲಿದೆಯೇ?. ಈ ಅರ್ಜಿ ವಿಚಾರದಲ್ಲಿ ಮಧ್ಯಂತರ ಆದೇಶ ಹೊರಡಿಸಲಿದೆಯೇ? ಎಂದು ಕಾದು ನೋಡಬೇಕಿದೆ.

    ಸಿಸೋಡಿಯಾ ಅವರು ಮದ್ಯ ಮಾರಾಟಗಾರರಿಗೆ ಅನಗತ್ಯ ಪ್ರಯೋಜನಗಳನ್ನು ನೀಡುತ್ತಿದ್ದಾರೆ. ಅಕ್ರಮವಾಗಿ ರಿಯಾಯಿತಿಯನ್ನು ನೀಡುತ್ತಿದ್ದಾರೆ ಹಾಗೂ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರ ಒಪ್ಪಿಗೆಯಿಲ್ಲದೇ ಅಬಕಾರಿ ನೀತಿಗಳನ್ನು ಬದಲಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

    ದೆಹಲಿಯ ಹೊಸ ಅಬಕಾರಿ ನೀತಿಯನ್ನು ಲೆಫ್ಟಿನೆಂಟ್ ಗೌರ್ನರ್ ವಿ. ಕೆ. ಸಕ್ಸೇನಾ ತಿರಸ್ಕಾರ ಮಾಡಿದ್ದಾರೆ. ಈ ನೀತಿ ರೂಪಿಸುವಲ್ಲಿ ಮನೀಶ್‌ ಸಿಸೋಡಿಯಾ ಅವರ ಪಾತ್ರವಿದೆ. ಈ ಕುರಿತು ತನಿಖೆ ನಡೆಸಲು ಮನೀಶ್‌ ಸಿಸೋಡಿಯಾ ವಿಚಾರಣೆ ನಡೆಸುವ ಅಗತ್ಯವಿದೆ. ಆದ್ದರಿಂದ ಅವರನ್ನು ಸಿಬಿಐ ವಶಕ್ಕೆ ನೀಡಬೇಕು ಎಂದು ವಿಶೇಷ ನ್ಯಾಯಾಲಯದಲ್ಲಿ ಮನವಿ ಮಾಡಲಾಗಿತ್ತು. ಸಿಬಿಐ ವಾದ ಪುರಸ್ಕರಿಸಿದ ನ್ಯಾಯಾಲಯ ಮಾರ್ಚ್ 4ರ ತನಕ ಮನೀಶ್‌ ಸಿಸೋಡಿಯಾರನ್ನು ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.

    ಪುಲ್ವಾಮಾದಲ್ಲಿ ಎನ್‌ಕೌಂಟರ್ : ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts