

ನವದೆಹಲಿ: 2020-21ರಲ್ಲಿ ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಸೇರಿದಂತೆ ಪ್ರಕರಣದ ಇತರೆ ಆರೋಪಿಗಳ ವಿರುದ್ಧ ಸಿಬಿಐ ಆರೋಪ ಪಟ್ಟಿ ದಾಖಲಿಸಿದೆ.
ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಹಾಗೂ ವ್ಯಾಪಕ ಭ್ರಷ್ಟಾಚಾರ ಸಂಬಂಧ ಮನೀಶ್ ಸಿಸೋಡಿಯಾರನ್ನು ಫೆಬ್ರವರಿ 26ರಂದು ಸಿಬಿಐ ವಶಕ್ಕೆ ಪಡೆದಿತ್ತು.
ದೆಹಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಸೇರಿದಂತೆ ಪ್ರಕರಣದ ಇತರೆ ಆರೋಪಿಗಳಾದ ಬುಚ್ಚಿ ಬಾಬು ಗೋರಂಟ್ಲಾ, ಅಮನ್ದೀಪ್ ಸಿಂಗ್ ಧಲ್, ಅರ್ಜುನ್ ಪಾಂಡೆ ವಿರುದ್ಧ ಸಿಬಿಐ ಆರೋಪ ಪಟ್ಟಿ ಸಲ್ಲಿಸಿದೆ.
ಆರೋಪಿತರ ವಿರುದ್ಧ ಭಅರತ ದಂಡ ಸಂಹಿತೆ (IPC Section) 120-B, 201 ಹಾಗೂ 420 ಅಡಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಇದು ಒಟ್ಟಾರೆಯಾಗಿ ಎರಡನೇ ಆರೋಪ ಪಟ್ಟಿಯಾಗಿದ್ದು ಕಳೆದ ವರ್ಷ ನವೆಂಬರ್ 25ರಂದು ಮೊದಲ ಆರೋಪ ಪಟ್ಟಿ ಸಲ್ಲಿಸಲಾಗಿತ್ತು.