More

    ದೆಹಲಿ ಮಾಜಿ ಡಿಸಿಎಂ ಮನೀಶ್​​ ಸಿಸೋಡಿಯಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ

    ನವದೆಹಲಿ: ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ಎಸಗಿ ಬಂಧನಕ್ಕೊಳಪಟ್ಟಿರುವ ದೆಹಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿದ್ದಾರೆ. ಮಾರ್ಚ್ 20ರ ವರೆಗೂ ನ್ಯಾಯಾಂಗ ಬಂಧನ ವಿಧಿಸಿ ರೌಸ್ ಅವೆನ್ಯೂ ಕೋರ್ಟ್ ಆದೇಶ ನೀಡಿದೆ.

    ಇದನ್ನೂ ಓದಿ: 22 ವರ್ಷಗಳಿಂದ ಪತ್ನಿಯ ತವರು ಮನೆಯಲ್ಲಿ ಹೋಳಿ ಹಬ್ಬಕ್ಕೆ ಹೋಗಿಲ್ಲ; 10 ದಿನ ರಜೆ ನೀಡಿ ಎಂದು ಪತ್ರ ಬರೆದ ಇನ್ಸ್​ಪೆಕ್ಟರ್!

    ದೆಹಲಿ ನ್ಯಾಯಾಲಯ ಮಾ.10ಕ್ಕೆ ಮನೀಶ್ ಸಿಸೋಡಿಯ ಜಾಮೀನು ಅರ್ಜಿ ವಿಚಾರಣೆ ನಡೆಸಲಿದೆ. ಒಟ್ಟು 7 ದಿನಗಳ ಕಾಲ ಸಿಬಿಐ ವಶದಲ್ಲಿದ್ದ ಸಿಸೋಡಿಯಾ, ಇಂದು ತಿಹಾರ್ ಜೈಲಿಗೆ ಸ್ಥಳಾಂತರವಾಗಲಿದ್ದಾರೆ. ಸಿಬಿಐ ಕಸ್ಟಡಿಯಿಂದ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಹಿಂದಿನ ವಿಚಾರಣೆ ವೇಳೆ ಮನೀಶ್ ಸಿಸೋಡಿಯಾ ಮನವಿ ಮಾಡಿದ್ದರು. ಈ ವೇಳೆ ಕೇಳಿದ ಪ್ರಶ್ನೆಯನ್ನೇ ಕೇಳಿ ಮಾನಸಿಕ ಹಿಂಸೆ ನೀಡುತ್ತಾರೆ ಎಂದು ಆರೋಪಿಸಿದ್ದರು.

    ಮನೀಶ್ ಸಿಸೋಡಿಯಾ ಜತಗೆ ಬಂಧನವಾಗಿದ್ದ ದೆಹಲಿ ಮಾಜಿ ಆರೋಗ್ಯ ಸಚಿವ ಸತೇಂದ್ರ ಜೈನ್ ಈಗಾಗಲೇ ತಿಹಾರ್ ಜೈಲಿನಲ್ಲಿದ್ದಾರೆ. (ಏಜೆನ್ಸೀಸ್)

    ಇದನ್ನೂ ಓದಿ: ಕೋಲಾರ | ಪತ್ನಿಯನ್ನು ಹತ್ಯೆಗೈದು ನೇರವಾಗಿ ಪೊಲೀಸ್ ಠಾಣೆಗೆ ಹೋದ ಪತಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts