More

    ಅಬಕಾರಿ ನೀತಿ ಪ್ರಕರಣ; ಮನೀಶ್​ ಸಿಸೋಡಿಯಾ ನ್ಯಾಯಾಂಗ ಬಂಧನ ನವೆಂಬರ್ 22ರವರೆಗೆ ವಿಸ್ತರಣೆ

    ನವದೆಹಲಿ: 2021-22ರಲ್ಲಿ ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಮಾಜಿ ಉಪಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ನ್ಯಾಯಾಲಯ ನವೆಂಬರ್ 22ರವರೆಗೆ ವಿಸ್ತರಿಸಿ ಆದೇಶಿಸಿದೆ.

    ಅಬಕಾರಿ ನೀತಿಯಲ್ಲಿನ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ತನಿಖೆ ನಡೆಸುತ್ತಿದ್ದು, ಕೆಲ ದಿನಗಳ ಹಿಂದೆ ಎಎಪಿ ನಾಯಕ ಸಂಜಯ್​ ಸಿಂಗ್​ ಹಾಗೂ ಅವರ ಆಪ್ತರನ್ನು ತನಿಖಾ ಸಂಸ್ಥೆಗಳು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿವೆ.

    ಸಿಸೋಡಿಯಾ ಅವರನ್ನು ಗುರುವಾರ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗಳ ವಕೀಲರು ದಾಖಲೆಗಳು ಸರಿಯಾಗಿಲ್ಲದ ಕಾರಣ ಅವುಗಳನ್ನು ಪರಿಶೀಲಿಸಲು ಸವಾಲುಗಳನ್ನು ಎದುರಿಸುತ್ತಿದ್ದಾರೆ.

    ಇದನ್ನೂ ಓದಿ: ಲೈಂಗಿಕ ಕಿರುಕುಳ ಪ್ರಕರಣ; ಗುಣತಿಲಕೆ ಮೇಲಿನ ನಿಷೇಧವನ್ನು ಹಿಂಪಡೆದ ಶ್ರೀಲಂಕಾ ಕ್ರಿಕೆಟ್

    2022ರ ಜುಲೈ 22ರಂದು, ಎಲ್‌ಜಿ ವಿಕೆ ಸಕ್ಸೇನಾ ಅವರು ಹೊಸ ಅಬಕಾರಿ ನೀತಿಯ ಅನುಷ್ಠಾನದಲ್ಲಿ ಆಪಾದಿತ ನಿಯಮ ಉಲ್ಲಂಘನೆ ಮತ್ತು ಕಾರ್ಯವಿಧಾನದ ಲೋಪಗಳ ಕುರಿತು ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದರು. ಪ್ರಕರಣದ ಎಲ್ಲಾ ಆರೋಪಿಗಳ ವಿರುದ್ಧ ಸಲ್ಲಿಸಲಾದ ಆರೋಪಪಟ್ಟಿಯಲ್ಲಿನ ದಾಖಲೆಗಳನ್ನು ಈಗಾಗಲೇ ಸಲ್ಲಿಸಲಾಗಿದೆ ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿತ್ತು. ಆಮ್ ಆದ್ಮಿ ಪಕ್ಷದ (ಎಎಪಿ) ಮಹತ್ವಾಕಾಂಕ್ಷೆಯ ದೆಹಲಿ ಅಬಕಾರಿ ನೀತಿಯನ್ನು 31 ಜುಲೈ 2022 ರಂದು ರದ್ದುಗೊಳಿಸಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts