ಮದ್ದೂರು: ಫೆಬ್ರುವರಿ 2 ರಂದು ನಡೆಯುವ ಮನ್‌ಮುಲ್ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ ನಾನು ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಪಕ್ಷದ ವರಿಷ್ಠರು ಅನುಮತಿ ನೀಡಿದ್ದು, ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ನನ್ನ ಗೆಲುವಿಗೆ ಸಹಕಾರ ನೀಡಬೇಕೆಂದು ಮನ್‌ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಮನವಿ ಮಾಡಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎರಡನೇ ಬಾರಿಗೆ ಮನ್‌ಮುಲ್ ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಪಕ್ಷದ ವರಿಷ್ಠರು ಸೇರಿದಂತೆ ಎಲ್ಲರೂ ನಾನು ಸ್ಪರ್ಧೆ ಮಾಡಲು ಒಪ್ಪಿಗೆ ಸೂಚಿಸಿದ್ದಾರೆಂದು ತಿಳಿಸಿದರು.
ಕಳೆದ ಬಾರಿ ನಾನು ಮುನ್‌ಮುಲ್ ನಿರ್ದೇಶಕನಾಗಿ ಆಯ್ಕೆಯಾದ ನಂತರ ಹಾಲು ಉತ್ಪಾದಕರಿಗೆ ಹಲವು ರೀತಿಯಲ್ಲಿ ಅನುಕೂಲ ಕಲ್ಪಿಸುವ ಜತೆಗೆ ಹೈನುಗಾರಿಕೆಗೆ ಅಗತ್ಯ ಪ್ರೋತ್ಸಾಹ ನೀಡಿದ್ದೇನೆ. ಮುಂದೆಯೂ ಹಾಲು ಉತ್ಪಾದಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಮತ್ತೊಮ್ಮೆ ಸ್ಪರ್ಧೆ ಮಾಡಿದ್ದು ನನಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಸ್ಪರ್ಧೆ ಕುರಿತು ಎಸ್.ಪಿ.ಸ್ವಾಮಿ ಅವರು ಸಭೆಯಲ್ಲಿದ್ದ ಮುಖಂಡರು ಹಾಗೂ ಕಾರ್ಯಕರ್ತರ ಅನಿಸಿಕೆ ಕೇಳಿದಾಗ ನೀವು ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ನಿಮಗೆ ಅಗತ್ಯ ಸಹಕಾರ ನೀಡುತ್ತೇವೆ. ನೀವು ಮನ್‌ಮುಲ್ ನಿರ್ದೇಕರಾಗಿ ಆಯ್ಕೆಯಾದರೆ ಹಾಲು ಉತ್ಪಾದಕರಿಗೆ ಹಾಗೂ ರೈತರಿಗೆ ಅನುಕೂಲವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಬಿಜೆಪಿ ತಾಲೂಕು ಅಧ್ಯಕ್ಷ ಸಿ.ಕೆ.ಸತೀಶ್, ಬಿಜೆಪಿ ತಾಲೂಕು ಮಹಿಳಾ ಅಧ್ಯಕ್ಷೆ ಶ್ವೇತಾ, ಜಿಲ್ಲಾ ಉಪಾಧ್ಯಕ್ಷ ಸತೀಶ್, ಟಿಎಪಿಸಿಎಂಎಸ್ ಅಧ್ಯಕ್ಷ ಎಸ್.ಬಿ.ಮಹದೇವು, ಎಪಿಎಂಸಿ ಮಾಜಿ ಅಧ್ಯಕ್ಷ ಜಿ.ಸಿ.ಮಹೇಂದ್ರ, ಜಿಪಂ ಮಾಜಿ ಸದಸ್ಯರಾದ ಕೃಷ್ಣೇಗೌಡ, ಮರಿಹೆಗ್ಗಡೆ, ಮುಖಂಡರಾದ ಮನು, ಎಂ.ಸಿ.ಸಿದ್ದು, ಡಾಬಾ ಕಿಟ್ಟಿ, ಅಭಿಷೇಕ್, ಶಂಕರ್, ಶೇಖರ್, ಮಧುಕುಮಾರ್, ನಾಗೇಶ್, ಗ್ರಾಪಂ ಸದಸ್ಯರು, ಸಹಕಾರ ಸಂಘದ ಅಧ್ಯಕ್ಷರು ಹಾಗೂ ನಿರ್ದೇಶಕರು ಇದ್ದರು.