

ಮಂಡ್ಯ: ಜಿಲ್ಲಾ ಹಾಲು ಒಕ್ಕೂಟದಿಂದ ನಂದಿನಿ ಪನ್ನೀರ್ ನಿಪ್ಪಟ್ಟು ಹಾಗೂ ನಂದಿನಿ ಸ್ಪೆಷಲ್ ಹಾಲಿನ ಬರ್ಫಿ ಎಂಬ ಎರಡು ನೂತನ ಉತ್ಪನ್ನಗಳನ್ನು ಶುಕ್ರವಾರ ಮನ್ಮುಲ್ ಕಚೇರಿಯ ಡಾ.ವರ್ಗೀಸ್ ಕೂರಿಯನ್ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷ ಬಿ.ಬೋರೇಗೌಡ ಮತ್ತು ನಿರ್ದೇಶಕರು ಮಾರುಕಟ್ಟೆಗೆ ಬಿಡುಗಡೆ ಮಾಡಿದರು.
ಅಧ್ಯಕ್ಷ ಬೋರೇಗೌಡ ಮಾತನಾಡಿ, ಒಕ್ಕೂಟದಿಂದ ಹೊಸ ಉತ್ಪನ್ನ ಮಾರುಕಟ್ಟೆಗೆ ಬರುತ್ತಿದೆ. ಈಗಾಗಲೇ ನಂದಿನಿ ತುಪ್ಪ ಸಾಕಷ್ಟು ಪ್ರಮಾಣದಲ್ಲಿ ಖರೀದಿಯಾಗುತ್ತಿವೆ. ಇದು ಕೂಡ ಹಾಗೇಯೆ ಖರೀದಿಯಾಗಿ ಜನಮನ್ನಣೆ ಗಳಿಸಲಿದೆ. ಇನ್ನು ಹೊಸ ಹೊಸ ರೀತಿಯಲ್ಲಿ ಉತ್ಪನ್ನ ಕೊಡುತ್ತೇವೆ. ಹೊಸ ಉತ್ಪನ್ನ ತಯಾರಿಕೆಯಿಂದ ಒಕ್ಕೂಟಕ್ಕೆ ಮತ್ತಷ್ಟು ಆದಾಯ ಬರಲು ಸಾಧ್ಯವಾಗಿದೆ. ಸಾರ್ವಜನಿಕರು ಮನ್ ಮುಲ್ ಪ್ರಾಡಕ್ಟ್ ಗಳನ್ನು ಮತ್ತಷ್ಟು ಖರೀದಿಸಿ ಸಹಕರಿಸುವಂತೆ ಮನವಿ ಮಾಡಿದರು. ಮನ್ಮುಲ್ ಉಪಾಧ್ಯಕ್ಷ ರಘುನಂದನ್, ನಿರ್ದೇಶಕ ಉಮ್ಮಡಳ್ಳಿ ಶಿವಪ್ಪ, ರೂಪಾ, ಪುಷ್ಪಲತಾ ಇತರರಿದ್ದರು.