More

    ಮಾಜಿ ಪ್ರಧಾನಿ ದೇವೇಗೌಡರ ಕುರಿತ ‘ಮಣ್ಣಿನ ಮಗ’ ಕೃತಿ ಬಿಡುಗಡೆ ಗುರುವಾರ

    ಬೆಂಗಳೂರು:ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುರಿತು ಕನ್ನಡ ಹೋರಾಟಗಾರ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಯೂ ಆಗಿರುವ ನೇ.ಭ.ರಾಮಲಿಂಗ ಶೆಟ್ಟಿ ಬರೆದಿರುವ ‘ಮಣ್ಣಿನ ಮಗ’ ಕೃತಿಯು ಇಂದು (ಗುರುವಾರ) ಬಿಡುಗಡೆಗೊಳ್ಳಲಿದೆ.

    ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲಿ ಸಂಜೆ 5-00 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಕ್ಷೇತ್ರದ ಪೀಠಾಧ್ಯಕ್ಷರಾದ ಶ್ರೀ ನಿರ್ಮಾಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಎಚ್.ಡಿ.ಕುಮಾರಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಕೃತಿ ಬಿಡುಗಡೆ ಮಾಡಲಿದ್ದಾರೆ. ಕೃತಿಯ ಕುರಿತು ನಾಡಿನ ಹಿರಿಯ ಸಂಶೋಧಕರಾದ ನಾಡೋಜ ಡಾ.ಹಂಪ ನಾಗರಾಜಯ್ಯ ಮಾತನಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹೃದಯ ತಜ್ಞ ಪದ್ಮಶ್ರೀ ಡಾ.ಸಿ.ಎನ್.ಮಂಜುನಾಥ್, ವಿಧಾನ ಪರಿಷತ್ತಿನ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಪಾಲ್ಗೊಳ್ಳಲಿದ್ದಾರೆ. ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

    ದೇವೇಗೌಡರ ಕುರಿತು ಮಹತ್ವದ ಚಿತ್ರಣಗಳನ್ನು ಕಲೆ ಹಾಕಿರುವ ಲೇಖಕರು ನಾಡು-ನುಡಿಗೆ ದೇವೇಗೌಡರು ಕೊಟ್ಟಿರುವ ಕೊಡುಗೆಗಳನ್ನು ಗುರುತಿಸಿದ್ದಾರೆ. ಇದುವರೆಗೂ ಹೊರ ಜಗತ್ತಿಗೆ ತಿಳಿಯದ ಅನೇಕ ಸಂಗತಿಗಳ ಮೇಲೆ ಕೃತಿ ಬೆಳಕು ಚೆಲ್ಲಿದೆ. ಸ್ನೇಹ ಬುಕ್ ಹೌಸ್‌ನ ಕೆ.ಬಿ.ಪರಶಿವಪ್ಪ ಈ ಕೃತಿಯನ್ನು ಪ್ರಕಟಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts