

ಮೂಡುಬಿದಿರೆ: ಪತ್ರಕರ್ತರ ನಡುವಿನ ಸೂಪರ್ ಸ್ಟಾರ್ ಮನೋಹರ ಪ್ರಸಾದ್. ಪತ್ರಕರ್ತರಿಗಿಂತ ಹೆಚ್ಚಾಗಿ ಸಾರ್ವಜನಿಕ ಸಂಪರ್ಕ ಅಧಿಕಾರಿಯಂತೆ ಜನಮಾನಸದಲ್ಲಿ ಬೆರೆತು ಹೋಗಿದ್ದರು. ಅವರದ್ದು ಬಹುಮುಖಿ ವ್ಯಕ್ತಿತ್ವ. ಅವರ ಹೆಸರನ್ನು ವಿರಾಸತ್ನಲ್ಲಿ ನಾವು ಈ ಬಾರಿ ಸ್ಮರಿಸಿಕೊಳ್ಳುತ್ತೇವೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು.
ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಮೂಡುಬಿದಿರೆ ತಾಲೂಕು ಘಟಕದ ಸಹಯೋಗದಲ್ಲಿ ಮಂಗಳವಾರ ‘ಮನೋಹರ ಪ್ರಸಾದ್ ನೆನಪು’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಮಾತನಾಡಿ, ಮನೋಹರ ಪ್ರಸಾದ್ ನಿಧನದಿಂದ ಕರಾವಳಿ ಪತ್ರಿಕೋದ್ಯಮದಲ್ಲಿ ಒಂದು ಶ್ರೇಷ್ಠ ಅಧ್ಯಾಯ ಯುಗಾಂತ್ಯ ಕಂಡಿದೆ ಎಂದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್, ಕಾರ್ಯಕಾರಿ ಸಮಿತಿ ಸದಸ್ಯರಾದ ಇಬ್ರಾಹಿಂ ಅಡ್ಕಸ್ಥಳ, ಜಗನ್ನಾಥ ಶೆಟ್ಟಿ ಬಾಳ, ಇಬ್ರಾಹಿಂ ಅಡ್ಕಸ್ಥಳ, ಅನ್ನು ಮಂಗಳೂರು, ಭಾಸ್ಕರ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ, ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸೀತಾರಾಮ ಆಚಾರ್ಯ ಉಪಸ್ಥಿತರಿದ್ದರು.
ಕನ್ನಡ ಸಾಹಿತ್ಯ ಪರಿಷತ್ತಿನ ಮೂಡುಬಿದಿರೆ ತಾಲೂಕು ಘಟಕದ ಅಧ್ಯಕ್ಷ ವೇಣುಗೋಪಾಲ ಶೆಟ್ಟಿ ಕೆ. ನಿರೂಪಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.