ಆರೆಲ್ತಡಿ -ಕೆಡೆಂಜಿ ಸಂಪರ್ಕ ರಸ್ತೆ ಕೆಸರುಮಯ

Latest News

ಸಂಸದ, ಮಾಜಿ ಕ್ರಿಕೆಟಿಗ ಗೌತಮ್​ ಗಂಭೀರ್​ ಕಾಣೆಯಾಗಿದ್ದಾರೆ ಹುಡುಕಿಕೊಡಿ: ದೆಹಲಿಯಲ್ಲಿ ಪತ್ತೆಯಾದ ನಾಪತ್ತೆ ಪೋಸ್ಟರ್​!

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಉಲ್ಬಣಿಸಿರುವ ವಾಯುಮಾಲಿನ್ಯ ಪರಿಸ್ಥಿತಿಯನ್ನು ಕುರಿತು ಚರ್ಚಿಸಲು ಸಂಸದೀಯ ಸಮಿತಿ ಕರೆದಿದ್ದ ಸಭೆಗೆ ಗೈರುಹಾಜರಾದ ಪೂರ್ವ ದೆಹಲಿಯ ಬಿಜೆಪಿ...

ಮೂಡಬಿದರೆಯ ತೋಡಾರು ಗ್ರಾಮದ ಅಯ್ಯಪ್ಪ ಭಕ್ತರೊಂದಿಗೆ ಹೆಜ್ಜೆ ಹಾಕುತ್ತಿರುವ ಶ್ವಾನ

ಚಿಕ್ಕಮಗಳೂರು: ತಿರುಪತಿಯಿಂದ ಶಬರಿಮಲೆಗೆ ಪಾದಯಾತ್ರೆ ಮೂಲಕ ಹೊರಟಿರುವ ಭಕ್ತರ ತಂಡದ ಜತೆ ಶ್ವಾನವೊಂದು ತೆರಳಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯ...

ವಿಆರ್​ಎಲ್​ ಪ್ರಾಯೋಜಕತ್ವದ ಹಾಫ್​ ಮ್ಯಾರಥಾನ್​ಗೆ ನಟಿ ಸುಮನ್ ನಗರ್‍ಕರ್ ಚಾಲನೆ: ಗಿನ್ನೆಸ್​ ದಾಖಲೆ ಬರೆದ ಓಜಲ್ ನಲವಡಿಗೆ ಸನ್ಮಾನ

ಹುಬ್ಬಳ್ಳಿ: ವಿಆರ್​ಎಲ್ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ಹಾಫ್ ಮ್ಯಾರಥಾನ್​ಗೆ ಖ್ಯಾತ ನಟಿ ಸುಮನ್ ನಗರ್‍ಕರ್ ಅವರು ಫ್ಲ್ಯಾಗ್ ಆಫ್ ಮಾಡುವ ಮೂಲಕ ಭಾನುವಾರ ಚಾಲನೆ...

16 ವರ್ಷದ ಬಾಲಕನಿಂದ ಸೋದರಸಂಬಂಧಿ ಬಾಲಕಿ ಮೇಲೆ ಅತ್ಯಾಚಾರ

ಗುರುಗ್ರಾಮ: ಹದಿನಾರು ವರ್ಷದ ಬಾಲಕನೊಬ್ಬ ಸೋದರಸಂಬಂಧಿಯ 15 ವರ್ಷದ ಬಾಲಕಿಯನ್ನು ಮಂಚಕ್ಕೆ ಕಟ್ಟಿಹಾಕಿ ಅತ್ಯಾಚಾರ ಎಸಗಿರುವ ಆರೋಪ ಹರಿಯಾಣದ ಗುರುಗ್ರಾಮ 51ನೇ ವಲಯದಲ್ಲಿ...

ಜೀಪಿಗೆ ಅಡ್ಡ ಬಂದ ಕಾಡುಕೋಣವನ್ನು ಹಿಮ್ಮೆಟ್ಟಿಸಿದ ಶ್ವಾನ: ವಿಡಿಯೋ ವೈರಲ್​

ಚಿಕ್ಕಮಗಳೂರು: ವಾಹನಕ್ಕೆ ಅಡ್ಡ ಬಂದ ಕಾಡುಕೋಣವನ್ನು ಶ್ವಾನ ಹಿಮ್ಮೆಟ್ಟಿಸಿದ ಘಟನೆಯ ವಿಡಿಯೋ ಚಿತ್ರೀಕರಣ ವೈರಲ್​ ಆಗಿದೆ. ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮದ ಕಾಫಿ ತೋಟದಲ್ಲಿ...

ಪ್ರವೀಣ್‌ರಾಜ್ ಕೊಲ ಕಡಬ

ಸವಣೂರು ಗ್ರಾಮದ ಆರೆಲ್ತಡಿ- ಕೆಡೆಂಜಿ ಭಾಗ ಸಂಪರ್ಕಿಸುವ ಜಿಲ್ಲಾ ಪಂಚಾಯಿತಿ ರಸ್ತೆ ಮಳೆಗಾಲ ಆರಂಭದಲ್ಲೇ ಕೆಸರು ರಸ್ತೆಯಾಗಿ ಮಾರ್ಪಟ್ಟಿದೆ. ಮಂಜೇಶ್ವರ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಚಾಪಳ್ಳ ಎಂಬಲ್ಲಿ ಕವಲೊಡೆದ ಆರೆಲ್ತಡಿ ಶಾಲೆ ಗೇಟಿನ ತನಕ ಸುಮಾರು ಎರಡು ಕಿ.ಮೀ. ಉದ್ದದ ಈ ರಸ್ತೆಯ ಅಧರ್ ಭಾಗ ಡಾಂಬರು ಹಾಗೂ ಕಾಂಕ್ರೀಟ್ ಅಳವಡಿಕೆಯಾಗಿದ್ದು ಇನ್ನಧರ್ ಭಾಗ ಮಣ್ಣಿನ ಕಚ್ಚಾ ರಸ್ತೆಯಾಗಿದೆ.
ಮಳೆ ಆರಂಭಕ್ಕೆ ಮೊದಲು ಗ್ರಾಮ ಪಂಚಾಯಿತಿ ಅನುದಾನದಿಂದ ರಸ್ತೆಯ ಹೊಂಡಗಳಿಗೆ ಮಣ್ಣು ತುಂಬಿಸಿ ಅಲ್ಪಸ್ವಲ್ಪ ದುರಸ್ತಿ ಮಾಡಲಾಗಿದ್ದರೂ, ಅದು ಪ್ರಥಮ ಮಳೆಗೇ ಕೊಚ್ಚಿ ಹೋಗಿದೆ. ಮಳೆ ನೀರು ಹರಿದು ಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದಿರುವುದು ರಸ್ತೆ ಮತ್ತಷ್ಟು ಹದಗೆಡಲು ಕಾರಣ.
ಬೆಳಂದೂರು ಜಿಪಂ ವ್ಯಾಪ್ತಿಯಲ್ಲಿರುವ ಈ ರಸ್ತೆಯನ್ನು ಆರೆಲ್ತಡಿ ಶಾಲೆ, ಅಂಗನವಾಡಿ, ಆರೆಲ್ತಡಿ ದೈವಸ್ಥಾನ ಹಾಗೂ ಜನವಸತಿ ಪ್ರದೇಶದ ಜನ ಅವಲಂಬಿಸಿದ್ದಾರೆ. ರಸ್ತೆ ತುಂಬ ಹೊಂಡಗಳು ತುಂಬಿದ್ದು, ಅದರಲ್ಲಿ ನೀರು ತುಂಬಿ ಪಾದಚಾರಿಗಳಿಗೂ ಕೆಸರು ಸಿಂಚನವಾಗುತ್ತಿದೆ. ರಸ್ತೆಯಲ್ಲಿ ಕೆಸರು ತುಂಬಿರುವುದರಿಂದ ವಾಹನ ಸವಾರರಿಗೂ ಸಮಸ್ಯೆಯಾಗಿ ಪರಿಣಮಿಸಿದೆ.

ಆರೆಲ್ತಡಿ- ಕೆಡೆಂಜಿ ರಸ್ತೆಗೆ ಸುಳ್ಯ ಶಾಸಕ ಎಸ್.ಅಂಗಾರ ಹಾಗೂ ಜಿಪಂ ಸದಸ್ಯರ ಅನುದಾನದ ಒಟ್ಟು 35 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್ ಹಾಗೂ ಡಾಂಬರು ಕಾಮಗಾರಿ ನಡೆದಿದೆ. ರಸ್ತೆಯ ಉಳಿದ ಭಾಗವನ್ನು ಗ್ರಾಮ ಪಂಚಾಯಿತಿ 14ನೇ ಹಣಕಾಸು ಆಯೋಗದ ಅನುದಾನ ಬಳಸಿ ದುರಸ್ತಿ ಮಾಡಲಾಗಿದೆ.
ಪ್ರಕಾಶ್ ಕುದ್ಮನಮಜಲು, ಸದಸ್ಯ, ಸವಣೂರು ಗ್ರಾಮ ಪಂಚಾಯಿತಿ

ರಸ್ತೆ ಅಭಿವೃದ್ಧಿಗಾಗಿ ಸುಳ್ಯ ಶಾಸಕರು, ಜಿಪಂ ಸದಸ್ಯರ 35 ಲಕ್ಷ ರೂ. ಅನುದಾನದಲ್ಲಿ ಡಾಂಬರು, ಕಾಂಕ್ರೀಟ್ ಅಳವಡಿಸಲಾಗಿದೆ. ಕಳೆದ ಬಾರಿ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಊರವರೊಂದಿಗೆ ಶ್ರಮದಾನದಿಂದ ಕೆಲಸ ಮಾಡಲಾಗಿದೆ. ಟಿಎಸ್‌ಪಿ ಯೋಜನೆಯಡಿಯಲ್ಲಿ ರಸ್ತೆಯ ಕಾಂಕ್ರೀಟ್ ಕೆಲಸಕ್ಕೆ ಸುಳ್ಯ ಶಾಸಕರ ಅನುದಾನದಲ್ಲಿ ರೂ.10 ಲಕ್ಷ ಬಿಡುಗಡೆಯಾಗಿದೆ. ಶೀಘ್ರದಲ್ಲಿ ಕಾಮಗಾರಿ ನಡೆಯಲಿದೆ.
ರಾಕೇಶ್ ರೈ ಕೆಡೆಂಜಿ, ಮಾಜಿ ಉಪಾಧ್ಯಕ್ಷರು ಸವಣೂರು ಗ್ರಾಪಂ

- Advertisement -

Stay connected

278,507FansLike
569FollowersFollow
608,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....