Friday, 14th December 2018  

Vijayavani

ಚಾಮರಾಜನಗರದಲ್ಲಿ ವಿಷವಾದ ಮಾರಮ್ಮನ ಪ್ರಸಾದ- ನಾಲ್ವರ ಸಾವು-40ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ, ಜಿಲ್ಲಾಧಿಕಾರಿ ಭೇಟಿ        ರಾಜಸ್ಥಾನ ಸಿಎಂ ಆಗಿ ಆಶೋಕ್ ಗೆಹ್ಲೋಟ್, ಯುವ ನಾಯಕ ಸಚಿನ್ ಪೈಲಟ್​​ಗೆ ಡಿಸಿಎಂ ಪಟ್ಟ- ಕಾಂಗ್ರೆಸ್​ನಿಂದ ಅಧಿಕೃತ ಘೋಷಣೆ        ಚೆನ್ನೈನ ರೇಲಾ ಆಸ್ಪತ್ರೆಗೆ ಭೇಟಿ ನೀಡಿ ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಬಿಎಸ್​ವೈ- ಸಿಎಂ ಎಚ್​ಡಿಕೆ ಚೆನ್ನೈಗೆ ಪ್ರಯಾಣ        ಭದ್ರತೆಗಾಗಿ ರಫೇಲ್ ಖರೀದಿ-ಸುಪ್ರೀಂಕೋರ್ಟ್ ತೀರ್ಪಿನಿಂದ ಭ್ರಮನಿರಸನ-ರಾಗಾ ವಿರುದ್ಧ ಹಾಲಿ ಮಾಜಿ ರಕ್ಷಣಾ ಸಚಿವರ ಕಿಡಿ        ನಾಲ್ಕು ದಿನದಲ್ಲಿ ಎಲ್ಲ ಸರಿಹೋಗುತ್ತೆ-ಪ್ರಯಾಣಿಕರಿಗೆ ಯಾವುದೇ ಆತಂಕ ಬೇಡ-ಪಿಲ್ಲರ್ ಬಿರುಕಿಗೆ BMRCL ಎಂಡಿ ಸ್ಪಷ್ಟನೆ        ನನಗೂ ಸಚಿವೆಯಾಗುವ ಆಸೆ ಇದೆ- ಅಂತರಂಗ ತೆರೆದಿಟ್ಟ ಲಕ್ಷ್ಮೀ ಹೆಬ್ಬಾಳ್ಕರ್- ಕೈ ಸಚಿವಾಕಾಂಕ್ಷಿಗಳ ಪಟ್ಟಿಗೆ ಈಗ ಹೊಸ ಸೇರ್ಪಡೆ       
Breaking News

ಕೆಆರ್​ಎಸ್​, ಕಬಿನಿಯಿಂದ ನದಿಗೆ ನೀರು: ಕಾವೇರಿ ಕೊಳ್ಳದಲ್ಲಿ ಮತ್ತೆ ಪ್ರವಾಹ ಭೀತಿ

Thursday, 09.08.2018, 4:52 PM       No Comments

ಮಂಡ್ಯ/ಮೈಸೂರು: ಕೇರಳದ ವೈನಾಡು ಪ್ರದೇಶದಲ್ಲಿ ಮತ್ತು ಕೊಡಗಿನಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್​ಎಸ್​ ಮತ್ತು ಕಬಿನಿ ಅಣೆಕಟ್ಟೆಯಿಂದ ನದಿಗೆ ಭಾರಿ ಪ್ರಮಾಣದ ನೀರು ಬಿಡಲಾಗಿದ್ದು, ಕಾವೇರಿ ಕೊಳ್ಳದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ.

ಕೆಆರ್​ಎಸ್​ ಅಣೆಕಟ್ಟೆಯ ಒಳಹರಿವು ಹೆಚ್ಚಿರುವ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ 25 ಸಾವಿರ ಕ್ಯೂಸೆಕ್​ ಇದ್ದ ಹೊರಹರಿವನ್ನು ಮಧ್ಯಾಹ್ನದ ವೇಳೆಗೆ 40 ಸಾವಿರ ಕ್ಯೂಸೆಕ್​ಗೆ ಹೆಚ್ಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಂಗನತಿಟ್ಟು ಪಕ್ಷಧಾಮದಲ್ಲಿ ದೋಣಿ ವಿಹಾರ ಸ್ಥಗಿತಗೊಳ್ಳುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇರಳದಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ಎಚ್​.ಡಿ. ಕೋಟೆ ತಾಲೂಕಿನ ಕಬಿನಿ ಜಲಾಶಯದ ಒಳಹರಿವಿನ ಪ್ರಮಾಣ 70 ಸಾವಿರ ಕ್ಯೂಸೆಕ್​ಗೆ ಹೆಚ್ಚಿದ್ದು, ಅಷ್ಟೇ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ.

ಒಳಹರಿವಿನ ಪ್ರಮಾಣ ಇನ್ನಷ್ಟು ಹೆಚ್ಚು ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯಾವುದೇ ಕ್ಷಣದಲ್ಲಾದರೂ ನದಿಗೆ ಇನ್ನೂ ಹೆಚ್ಚಿನ ಪ್ರಮಾಣದ ನೀರು ಹರಿಸುವ ಸಂಭವವಿದೆ. ಕಪಿಲಾ ನದಿಯ ಎರಡೂ ದಂಡೆಯಲ್ಲಿ ವಾಸಿಸುವ ಜನರು ತಮ್ಮ ಆಸ್ತಿ ಪಾಸ್ತಿ ಮತ್ತು ಜಾನುವಾರು ರಕ್ಷಣೆ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕಬಿನಿ ಜಲಾಶಯ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪುಟ್ಟಶೇಷಗಿರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Back To Top