ಕರೊನಾ: ಮೇ 1 ರಿಂದ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠ ಬಂದ್

Mantralayam 2 jan 20
Published on

ರಾಯಚೂರು: ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಮಂತ್ರಾಲಯ ಮಠದಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ. ಈ ಕುರಿತು ಶುಕ್ರವಾರ ಶ್ರೀರಾಘವೇಂದ್ರಸ್ವಾಮಿ ಮಠದ ಆಡಳಿತ ಮಂಡಳಿಯಿಂದ ಪ್ರಕಟಣೆಯಾಗಿದೆ.

ಮೇ 1 ರಿಂದ ಪ್ರತ್ಯಕ್ಷದರ್ಶನ ,ತೀರ್ಥಪ್ರಸಾದ ವ್ಯವಸ್ಥೆಯಿರುವುದಿಲ್ಲ. ಮಂತ್ರಾಲಯದಲ್ಲಿ ಸ್ಥಳೀಯವಾಗಿ ಲಾಕ್ ಡೌನ್ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಭಕ್ತರು ಆನ್‌ಲೈನ್ ಮೂಲಕ ಸೇವೆಯಲ್ಲಿ ಪಾಲ್ಗೊಳ್ಳಬಹುದು. ಮುಂದಿನ ಸೂಚನೆವರೆಗೆ ಭಕ್ತರು ಮಂತ್ರಾಲಯಕ್ಕೆ ಬರದಂತೆ ಮನವಿ ಮಾಡಲಾಗಿದೆ ಎಂದು ಮಠದ ವ್ಯವಸ್ಥಾಪಕ ವೆಂಕಟೇಶ ಜೋಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net