More

    ಮಂತ್ರಾಲಯ ಶ್ರೀ ರಾಘವೇಂದ್ರಸ್ವಾಮಿ ಶ್ರೀಮಠದಲ್ಲಿ ಉತ್ತರಾರಾಧನೆ ಸಂಭ್ರಮ

    ರಾಯಚೂರು: ಮಂತ್ರಾಲಯ ಶ್ರೀ ರಾಘವೇಂದ್ರಸ್ವಾಮಿ ಮಠದ ಆವರಣದಲ್ಲಿ ಗುರುವಾರ ಶ್ರೀಗುರು ರಾಯರ 349ನೇ ಆರಾಧನೆ ಮಹೋತ್ಸವದ ಉತ್ತಾರಾರಾಧನೆಯ ಸಂಭ್ರಮ ಮನೆ ಮಾಡಿತ್ತು.

    ಕರೊನಾ ಹಿನ್ನೆಲೆಯಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧವಿದ್ದರೂ ಶ್ರೀಮಠದ ಸಿಬ್ಬಂದಿ ಭಕ್ತಿ, ಶ್ರದ್ಧೆಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಬೆಳಗ್ಗೆ ರಾಯರ ಮೂಲ ವೃಂದಾವನಕ್ಕೆ ಪಂಚಾಮೃತ ಅಭಿಷೇಕ ನೆರವೇರಿಸಿದ ನಂತರದಲ್ಲಿ ಹೂವುಗಳಿಂದ ಅಲಂಕರಿಸಲಾಯಿತು. ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ವಸಂತೋತ್ಸವ ಆಚರಣೆ ಯತಿಗಳ ವೃಂದಾವನಗಳಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.

    ಶ್ರೀಮಠದ ಪ್ರಾಕಾರದಲ್ಲಿ ಉತ್ಸವ ಮೂರ್ತಿ ಪ್ರಹ್ಲಾದ ರಾಜರ ಮೆರವಣಿಗೆ ನಡೆಸಿದ ನಂತರ ಕರೊನಾ ಹಿನ್ನೆಲೆಯಲ್ಲಿ ಮಂತ್ರಾಲಯದ ರಥ ಬೀದಿಯಲ್ಲಿ ನಡೆಬೇಕಾಗಿದ್ದ ರಥೋತ್ಸವವನ್ನು ಶ್ರೀಮಠದ ಪ್ರಾಕಾರದಲ್ಲಿ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀಮಠದ ವ್ಯವಸ್ಥಾಪಕ ವೆಂಕಟೇಶ ಜೋಷಿ, ಸಹಾಯಕ ವ್ಯವಸ್ಥಾಪಕ ಐ.ಪಿ.ನರಸಿಂಹಾಚಾರ್, ಎನ್.ವಾದಿರಾಜಾಚಾರ್ ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು.

    ಮಂತ್ರಾಲಯ ಶ್ರೀ ರಾಘವೇಂದ್ರಸ್ವಾಮಿ ಶ್ರೀಮಠದಲ್ಲಿ ಉತ್ತರಾರಾಧನೆ ಸಂಭ್ರಮ
    ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ಶ್ರೀ ಗುರುರಾಯರ 349ನೇ ಆರಾಧನಾ ಮಹೋತ್ಸವದ ಉತ್ತರಾರಾಧನೆ ದಿನವಾದ ಗುರುವಾರ ಶ್ರೀಮಠ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಬಣ್ಣ ಎರಚುವ ಮೂಲಕ ವಸಂತೋತ್ಸವ ಆಚರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts