ರಸ್ತೆ ಅಪಘಾತದಲ್ಲಿ ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್ ಅಜ್ಜಿ & ಚಿಕ್ಕಪ್ಪ ಸಾವು | Manu Bhaker

blank

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ 2024ರ ಡಬಲ್ ಪದಕ ವಿಜೇತೆ ಮನು ಭಾಕರ್(Manu Bhaker) ಅವರ ಮನೆಯಲ್ಲಿ ದುಃಖ ಆವರಿಸಿದೆ. ಇತ್ತೀಚೆಗೆ ಮನು ಭಾಕರ್​ ಅವರಿಗೆ ರಾಷ್ಟ್ರಪತಿಗಳು ಖೇಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದರು. ಆದರೆ ಇದೀಗ ರಸ್ತೆ ಅಪಘಾತದಲ್ಲಿ ಅವರ ಅಜ್ಜಿ ಮತ್ತು ಚಿಕ್ಕಪ್ಪ ಮೃತಪಟ್ಟಿದ್ದಾರೆ.

ಇದನ್ನು ಓದಿ: RG Kar Case Verdict | ಈ ಕೆಲಸ ನಾನು ಮಾಡಿಲ್ಲ.. ; ತೀರ್ಪಿನ ಬಳಿಕ ಆರೋಪಿ ಸಂಜಯ್ ರಾಯ್ ಹೇಳಿದ್ದೇನು?

ಚಾರ್ಕಿ ದಾದ್ರಿಯ ಮಹೇಂದ್ರಗಢ ಬೈಪಾಸ್ ರಸ್ತೆಯಲ್ಲಿ ಭಾನುವಾರ ಬೆಳಗ್ಗೆ ಈ ಅಪಘಾತ ಸಂಭವಿಸಿದೆ. ವಾಸ್ತವವಾಗಿ, ಮನುವಿನ ಅಜ್ಜಿ ಮತ್ತು ಚಿಕ್ಕಪ್ಪ ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದರು. ವೇಗವಾಗಿ ಬಂದ ಬ್ರೆಝಾ ಕಾರು ಇವರ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತ ಎಷ್ಟು ಭೀಕರವಾಗಿತ್ತು ಎಂದರೆ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು, ಮನುಭಾಕರ್ ಅವರ ಅಜ್ಜಿಯ ಮತ್ತು ಚಿಕ್ಕಪ್ಪನ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪೊಲೀಸರು ಬರುವಷ್ಟರಲ್ಲಿ ಘಟನಾ ಸ್ಥಳದಿಂದ ಚಾಲಕ ಪರಾರಿಯಾಗಿದ್ದ. ಇದೀಗ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದು, ಚಾಲಕನಿಗಾಗಿ ಶೋಧ ಮುಂದುವರಿಸಿದ್ದಾರೆ. ಮೃತರನ್ನು 50 ವರ್ಷದ ಯುಧವೀರ್ (ಚಿಕ್ಕಪ್ಪ) ಮತ್ತು 65 ವರ್ಷದ ಸಾವಿತ್ರಿ (ಅಜ್ಜಿ) ಎಂದು ಪೊಲೀಸರು ಗುರುತಿಸಿದ್ದಾರೆ. ಇಬ್ಬರೂ ಮೂಲತಃ ಹರಿಯಾಣದ ಭಿವಾನಿ ಜಿಲ್ಲೆಯ ಕಲಾಲಿ ಗ್ರಾಮದ ನಿವಾಸಿಗಳು.

ಅಪಘಾತ ಸಂಭವಿಸಿದ್ದು ಹೇಗೆ?

ಮನು ಭಾಕರ್ ಅವರ ಚಿಕ್ಕಪ್ಪ ಯುಧವೀರ್ ಹರಿಯಾಣ ರೋಡ್‌ವೇಸ್‌ನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ವಾಸ್ತವವಾಗಿ ಅವರು ಬೆಳಗ್ಗೆ ಕೆಲಸಕ್ಕೆ ಹೋಗಲು ಸ್ಕೂಟಿಯಲ್ಲಿ ಹೊರಟಿದ್ದರು. ಆದರೆ ಮನು ಅವರ ಅಜ್ಜಿ ಸಾವಿತ್ರಿ ಲೋಹರು ಚೌಕ್‌ನಲ್ಲಿರುವ ತನ್ನ ಕಿರಿಯ ಮಗನ ಮನೆಗೆ ಹೋಗಬೇಕಾಗಿತ್ತು. ಈ ಕಾರಣಕ್ಕಾಗಿ ಯುದ್ಧವೀರ್ ಮತ್ತು ಸಾವಿತ್ರಿ ಒಟ್ಟಿಗೆ ಸ್ಕೂಟರ್‌ನಲ್ಲಿ ಹೋಗಿದ್ದರು ಎನ್ನಲಾಗಿದೆ. ಆದರೆ ಅವರು ಕಲಿಯಾಣ ತಿರುವಿನಲ್ಲಿ ಬಂದ ತಕ್ಷಣ ರಾಂಗ್ ಸೈಡ್‌ನಿಂದ ವೇಗವಾಗಿ ಬಂದ ಬ್ರೆಝಾ ಕಾರು ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆ ಬದಿಗೆ ಉರುಳಿ ಬಿದ್ದಿದ್ದು, ಮನು ಭಾಕರ್ ಅವರ ಅಜ್ಜಿ ಮತ್ತು ಚಿಕ್ಕಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮನು ಭಾಕರ್ ಅವರು ಪ್ಯಾರಿಸ್ 2024ರ ಒಲಿಂಪಿಕ್ಸ್‌ನಲ್ಲಿ ಇತಿಹಾಸವನ್ನು ಸೃಷ್ಟಿಸಿದರು. ಸ್ವಾತಂತ್ರ್ಯದ ನಂತರ ಒಂದೇ ಆವೃತ್ತಿಯ ಕ್ರೀಡಾಕೂಟದಲ್ಲಿ ಎರಡು ಪದಕಗಳನ್ನು ಗೆದ್ದ ಮೊದಲ ಭಾರತೀಯ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ವೈಯಕ್ತಿಕ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚಿನ ಪದಕ ಮತ್ತು 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದಿದ್ದಾರೆ. ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಭಾರತದ ಮೊದಲ ಮಹಿಳಾ ಶೂಟರ್ ಮನು ಭಾಕರ್​. (ಏಜೆನ್ಸೀಸ್​​)

RG Kar Case Verdict | ಪ್ರಕರಣದಲ್ಲಿ ಆರೋಪಿ ಸಂಜಯ್ ರಾಯ್ ತಪ್ಪಿತಸ್ಥ ಎಂದು ನ್ಯಾಯಾಲಯದ ತೀರ್ಪು; ಸೋಮವಾರ ಶಿಕ್ಷೆ ಪ್ರಕಟ

Share This Article

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…

ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips

ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…