More

    ಓದಿನಿಂದ ಬೌದ್ಧಿಕ ಮಟ್ಟ ಹೆಚ್ಚಳ

    ಮಾನ್ವಿ: ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ಸಾಹಿತ್ಯದ ಅಭಿರುಚಿ ಮೂಡಿಸಬೇಕು. ಇದರಿಂದ ವಿದ್ಯಾರ್ಥಿಗಳು ಮುಂದೆ ಸಾಹಿತಿಗಳು ಹಾಗೂ ಬರಗಾರರು ಆಗಲು ಸಾಧ್ಯ ಎಂದು ಎಂದು ಸಾಹಿತಿ ಕುಂ.ವೀರಭದ್ರಪ್ಪ ಹೇಳಿದರು.

    ಪಟ್ಟಣದ ನೇತಾಜಿ ಶಿಕ್ಷಣ ಸಂಸ್ಥೆಯಲ್ಲಿನ ಗ್ರಂಥಾಲಯಕ್ಕೆ 100 ಪುಸ್ತಕಗಳನ್ನು ದೇಣಿಗೆ ನೀಡಿ ಭಾನುವಾರ ಮಾತನಾಡಿದರು. ವಿದ್ಯಾರ್ಥಿಗಳು ಪಠ್ಯದೊಂದಿಗೆ ನಿತ್ಯ ಪುಸ್ತಕಗಳನ್ನು ಓದಬೇಕು. ಇದರಿಂದ ಬೌದ್ಧಿಕ ಮಟ್ಟ ಹೆಚ್ಚುತ್ತದೆ. ನಾನು ಕೊಟ್ಟಿರುವ ಪುಸ್ತಕಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

    ನೇತಾಜಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಕೆ.ಈ.ನರಸಿಂಹ ಮಾತನಾಡಿ, ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ನಮ್ಮ ಶಿಕ್ಷಣ ಸಂಸ್ಥೆ ಮೇಲಿನ ಕಾಳಜಿಯಿಂದ 100 ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ವಿದ್ಯಾರ್ಥಿಗಳು ಅಮೂಲ್ಯವಾದ ಪುಸ್ತಕಗಳನ್ನು ಓದಬೇಕು ಎಂದರು. ಸಂಸ್ಥೆ ಕಾರ್ಯದರ್ಶಿ ಕೆ.ವಿಜಯಲಕ್ಷ್ಮೀ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts