More

    ಶೈಕ್ಷಣಿಕ ಕ್ಷೇತ್ರ ಅಭಿವೃದ್ಧಿಗೆ ಒತ್ತು ನೀಡುವುದಾಗಿ ಭರವಸೆ ನೀಡಿದ ಶಾಸಕ ರಾಜಾ ವೆಂಕಟಪ್ಪನಾಯಕ

    ಮಾನ್ವಿ: ಮಾನ್ವಿ ವಿಧಾನ ಸಭಾ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ಹಳೇ ಶಾಲಾ ಕಟ್ಟಡಗಳನ್ನು ತೆರವುಗೊಳಿಸಿ ಹೊಸ ಕಟ್ಟಡಗಳನ್ನು ನಿರ್ಮಿಸಲಾಗಿದೆ ಎಂದು ಶಾಸಕ ರಾಜಾ ವೆಂಕಟಪ್ಪನಾಯಕ ಹೇಳಿದರು.

    ತಾಲೂಕಿನ ಪೋತ್ನಾಳ ಗ್ರಾಮದಲ್ಲಿ ಶನಿವಾರ ಪದವಿ ಪೂರ್ವ ಕಾಲೇಜು ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ, ಪಿಯು ಶಿಕ್ಷಣ ಇಲಾಖೆಯಿಂದ 2019-20ನೇ ಸಾಲಿನ ವಿಶೇಷ ಅಭಿವೃದ್ಧಿ ಯೋಜನೆಯಡಿ 1.35 ಕೋಟಿ ರೂ. ವೆಚ್ಚದಲ್ಲಿ ಪೋತ್ನಾಳ ಗ್ರಾಮದಲ್ಲಿ ಪಪೂ ಕಾಲೇಜು ಕಟ್ಟಡ ನಿರ್ಮಿಸಲಾಗಿದೆ ಎಂದರು.

    ಹೆಚ್ಚಿನ ಅಭ್ಯಾಸಕ್ಕಾಗಿ ಈ ಭಾಗದ ವಿದ್ಯಾರ್ಥಿಗಳು ಬೇರೆ ಕಡೆ ಹೋಗದೆ ಸ್ಥಳೀಯ ಕಾಲೇಜುಗಳಲ್ಲಿ ದಾಖಲು ಪಡೆಯುವ ಮೂಲಕ ಉನ್ನತ ವಿದ್ಯಾಭ್ಯಾಸ ಮಾಡಬೇಕು. ಗ್ರಾಮಿಣ ಭಾಗದ ವಿದ್ಯಾರ್ಥಿಗಳು ಕೂಡ ವೈದ್ಯರು, ಇಂಜಿನಿಯರ್‌ಗಳು ಆಗಬೇಕೆನ್ನುವ ಕನಸನ್ನು ಈಡೇರಿಸಲು ಮುಂದಿನ ದಿನಗಳಲ್ಲಿ ವಿಜ್ಞಾನ ವಿಭಾಗ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದರು.

    ಗ್ರಾಪಂ ಅಧ್ಯಕ್ಷೆ ಗಂಗಮ್ಮ, ಜೆಡಿಎಸ್ ರಾಜ್ಯ ಯುವ ಘಟಕದ ಉಪಾಧ್ಯಕ್ಷ ರಾಜಾ ರಾಮಚಂದ್ರ ನಾಯಕ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶ್ರೀಶೈಲಗೌಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಸಂಗಮೇಶ ಮುಧೋಳ, ಮುಖಂಡರಾದ ಶರ್ಫುದ್ದೀನ್ ಪೋತ್ನಾಳ, ನವೀನ್ ನಾಡಗೌಡ ಪೋತ್ನಾಳ, ಇಸ್ಮಾಯಿಲ್ ಸಾಬ್, ರವಿಕುಮಾರ, ಈರಣ್ಣ ಮರ್ಲಾಟ್ಟಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts