More

    19 ರಂದು ಮಾನ್ವಿಗೆ ಮಾಜಿ ಸಿಎಂ ಎಚ್‌ಡಿಕೆ

    ಮಾನ್ವಿ: ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ಆ.19ರಂದು ಆಯೋಜಿಸಲಾಗಿರುವ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉದ್ಘಾಟನೆ ಮಾಡಲಿದ್ದಾರೆ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ತಿಳಿಸಿದರು.
    ಪಟ್ಟಣದ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಅನೇಕರು ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ. ಕಾರ್ಯಕರ್ತರ ಆಪೇಕ್ಷೆ ಮೇರೆಗೆ ಕುಮಾರಸ್ವಾಮಿ ಆಗಮಿಸುತ್ತಿದ್ದಾರೆ ಎಂದರು. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಶಾಸಕರಾದ ಬಂಡೆಪ್ಪ ಕಾಶೆಂಪುರ, ವೆಂಕಟರಾವ ನಾಡಗೌಡ, ಗೌರಿಶಂಕರ, ತಿಪ್ಪೇಸ್ವಾಮಿ, ಎಂಎಲ್‌ಸಿ ಟಿ.ಎ.ಶರವಣ, ಜೆಡಿಎಸ್ ಯುವ ಮುಖಂಡ ಶರಣೇಗೌಡ ಕಂದಕೂರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts