More

    ಕಕ್ಷಿದಾರರಿಗೆ ನ್ಯಾಯ ಒದಗಿಸುವುದು ಕರ್ತವ್ಯ

    ಮಾನ್ವಿ: ಸಂವಿಧಾನಬದ್ಧ ಅಧಿಕಾರ ಬಳಸಿಕೊಂಡು ನ್ಯಾಯಾಧೀಶರು ಹಾಗೂ ಹಿರಿಯ-ಕಿರಿಯ ವಕೀಲರು ಕಕ್ಷಿದಾರರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು ಎಂದು ಉಚ್ಚ ನ್ಯಾಯಾಲಯ ಹಾಗೂ ರಾಯಚೂರು ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿ ಪ್ರದೀಪ್‌ಸಿಂಗ್ ಯೆರೂರ್ ಹೇಳಿದರು.

    ಜಿಲ್ಲಾ ನ್ಯಾಯಾಂಗ ಮತ್ತು ಪಿಡಬ್ಲುೃಡಿ ಹಾಗೂ ವಕೀಲರ ಸಂಘದ ಆಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ನ್ಯಾಯಾಲಯ ಕಟ್ಟಡ ಉದ್ಘಾಟನೆ ಹಾಗೂ ವಕೀಲರ ಸಂಘದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೇರವೇರಿಸಿ ಮಾತನಾಡಿ, ಮಾನ್ವಿಯಲ್ಲಿ 9.23 ಕೋಟಿ ವೆಚ್ಚದಲ್ಲಿ ಸುಸಜ್ಜಿತ ನ್ಯಾಯಾಲಯ ಕಟ್ಟಡ ನಿರ್ಮಿಸಲಾಗಿದೆ. ಕಕ್ಷಿದಾರರಿಗೆ ನ್ಯಾಯ ಒದಗಿಸಲು ನ್ಯಾಯಾಧೀಶರು ಮತ್ತು ವಕೀಲರು ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸಬೇಕಿದೆ ಎಂದು ತಿಳಿಸಿದರು.

    ಶಾಸಕ ರಾಜಾ ವೆಂಕಟಪ್ಪನಾಯಕ ಮಾತನಾಡಿ, ನಮ್ಮ ಮನೆತನವು ವಕೀಲ ವೃತ್ತಿಯಲ್ಲಿ ಗುರುತಿಸಿಕೊಂಡು ಸಮಾಜಕ್ಕೆ ನ್ಯಾಯ ದೊರಕಿಸಿಕೂಡುವಲ್ಲಿ ನಿರಂತರ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

    ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಟಿ.ಎನ್.ಇನವಳ್ಳಿ ಅಧ್ಯಕ್ಷತೆ ವಹಿಸಿದ್ದರು. ಮಾನ್ವಿ ಜೆಎಂಎಫ್‌ಸಿ ನ್ಯಾಯಾಧೀಶ ಆಶಪ್ಪ ಸಣ್ಣಮನಿ, ಹಿರಿಯ ಸಿವಿಲ್ ನ್ಯಾಯಾಧೀಶೆ ದೀಪಾ ಜಿ.ಮರ್ನೇಕರ್, ಮಾಜಿ ಶಾಸಕರಾದ ಬಸನಗೌಡ ಬ್ಯಾಗವಾಟ್, ಗಂಗಾಧರ ನಾಯಕ, ಸರ್ಕಾರಿ ಅಭಿಯೋಜಕಿ ಅರ್ಚನಾ ಹನುಮೇಶ, ವಕೀಲರ ಸಂಘದ ಅಧ್ಯಕ್ಷ ಮಲ್ಲಿಕಾರ್ಜು ಪಾಟೀಲ್, ಪ್ರಧಾನ ಕಾರ್ಯದರ್ಶಿ ರವಿಕುಮಾರ ಪಾಟೀಲ್, ಪಿಡಬ್ಲುೃಡಿ ಎಇ ಚನ್ನಬಸಪ್ಪ ಮೆಕಾಲೆ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts